ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ, ಸುಂಟರಗಾಳಿಗೆ ಇಬ್ಬರು ಬಲಿ - Mahanayaka
11:12 AM Thursday 21 - August 2025

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ, ಸುಂಟರಗಾಳಿಗೆ ಇಬ್ಬರು ಬಲಿ

rain
05/07/2023


Provided by

ವಿದ್ಯುತ್ ತಂತಿ ತುಳಿದು ಯುವಕ ಮೃತಪಟ್ಟ ಘಟನೆ ಮಂಗಳೂರು ಹೊರವಲಯದ ಸುರತ್ಕಲ್ ಸಮೀಪದ ಕುಳಾಯಿಯಲ್ಲಿ ನಡೆದಿದೆ.

ಮೃತಪಟ್ಟವನನ್ನು ಸಂತೋಷ್ ಎಂದು ಗುರುತಿಸಲಾಗಿದೆ. ತಡರಾತ್ರಿ ಸಮುದ್ರ ತೀರದಲ್ಲಿ ಇದ್ದ ಭಾರಿ ಸುಂಟರಗಾಳಿಗೆ ವಿದ್ಯುತ್ ತಂತಿ ಕಡಿದು ಬಿದ್ದಿದ್ದು ಮುಂಜಾನೆ ಕೈಗಾರಿಕಾ ಪ್ರದೇಶದಲ್ಲಿ ಕೆಲಸಕ್ಕೆ ಹೋಗುತ್ತಿದ್ದ ಸಂತೋಷ್ ಎಂಬವರು ವಿದ್ಯುತ್ ತಂತಿ ತುಂಡಾಗಿ ಬಿದ್ದಿರುವುದನ್ನು ತಿಳಿಯದೆ ಅದನ್ನು ತುಳಿದ ಪರಿಣಾಮ ಸ್ಥಳದಲ್ಲಿ ಮೃತಪಟ್ಟಿದ್ದಾರೆ.

ಸಮೀಪದಲ್ಲಿಯೇ ನಾರಾಯಣ ಮೂಲ್ಯ ಎಂಬುವವರ ಮನೆಯ ಮೇಲೆ ಬೃಹತ್ ಮರದ ಕೊಂಬೆಯೊಂದು ಬಿದ್ದು ಹಾನಿ ಸಂಭವಿಸಿದೆ.

ವಿದ್ಯುತ್ ತಂತಿಗಳ ಮೇಲೆ ಮರದ ಗೆಲ್ಲು ಒಂದು ಭಾಗ ಸಿಲುಕಿಕೊಂಡ ಪರಿಣಾಮ ಭಾರಿ ಜೀವ ಹಾನಿ ತಪ್ಪಿದೆ. ಸುಂಟರಗಾಳಿಗೆ ವಿವಿಧಡೆ ಮನೆಯ ಛಾವಣಿ ಶೀಟುಗಳು ಹಾರಿ ಹೋಗಿ ಹಾನಿ ಉಂಟಾಗಿದೆ. ಮೆಸ್ಕಾಂ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ವಿದ್ಯುತ್ ವ್ಯವಸ್ಥೆಯನ್ನು ಸರಿಪಡಿಸುವ ಕಾರ್ಯಕದಲ್ಲಿ ತೊಡಗಿದ್ದಾರೆ.

ಮೋರಿ ದಾಟುವಾಗ ಮಳೆ ನೀರಿಗೆ ಬಿದ್ದು ವ್ಯಕ್ತಿ ಸಾವು

ಮೋರಿ ದಾಟುವಾಗ ಮಳೆ ನೀರಿಗೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಮಂಗಳೂರು ನಗರದ ಹೊರವಲಯದ ಉಳ್ಳಾಲ ತಾಲೂಕಿನ ಸೋಮೇಶ್ವರ ಪುರಸಭಾ ವ್ಯಾಪ್ತಿಯ‌ ಪಿಲಾರು ಎಂಬಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು ಸೋಮೇಶ್ವರ ಪುರಸಭಾ ವ್ಯಾಪ್ತಿಯ ಪಿಲಾರು ಪಂಜಂದಾಯ ದೈವಸ್ಥಾನದ ಬಳಿಯ ಬಾಡಿಗೆ ಮನೆ ನಿವಾಸಿ ಸುರೇಶ್ ಗಟ್ಟಿ‌(52) ಎಂದು ಗುರುತಿಸಲಾಗಿದೆ.

ಮನೆ ಸಮೀಪದ ಮೋರಿ‌ ದಾಟುವ ಸಂದರ್ಭ ಸುರೇಶ್ ಗಟ್ಟಿ‌ ಆಯತಪ್ಪಿ ಬಿದ್ದು ಮಳೆ ನೀರಿಗೆ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ವೃತ್ತಿಯಲ್ಲಿ ಪೈಂಟರ್ ಆಗಿರುವ ಅವರು ಕೆಲಸ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ