ರಸ್ತೆ ಬದಿ, ಮನೆ ಮುಂದೆ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳವು ಮಾಡುತ್ತಿದ್ದ ಕಳ್ಳರ ಬಂಧನ
ಬೆಂಗಳೂರು:ರಸ್ತೆ ಬದಿಗಳಲ್ಲಿ ಮತ್ತು ಮನೆಯ ಮುಂದೆ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಿ ಸುಮಾರು 6.80 ಲಕ್ಷ ರೂ. ಮೌಲ್ಯದ 14 ದ್ವಿಚಕ್ರ ವಾಹನಗಳ ವಶಪಡಿಸಿಕೊಂಡಿದ್ದಾರೆ.
ಬೆಂಗಳೂರು ನಗರದ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ರಸ್ತೆಯ ಬದಿಗಳಲ್ಲಿ ಮತ್ತು ಮನೆಯ ಮುಂದೆ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಿ ಸುಮಾರು 6.80 ಲಕ್ಷ ಬೆಲೆ ಬಾಳುವ ವಿವಿಧ ಕಂಪನಿಗಳ 14 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳುವಲ್ಲಿ ಬಸವನಗುಡಿ ಠಾಣೆಯ ಪೊಲೀಸರು ಯಶಸ್ವಿಯಾಗಿರುತ್ತಾರೆ.
ಬಸವನಗುಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ದ್ವಿಚಕ್ರವಾಹನಗಳ ಕಳವು ಪ್ರಕರಣದ ಪತ್ತೆ ಕಾರ್ಯ ಸಮಯದಲ್ಲಿ ಮೂರು ಜನ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು ಇದುವರೆಗೂ 14 ಚಕ್ರವಾಹನಗಳನ್ನು ಆರೋಪಿಗಳಿಂದ ವಶಪಡಿಸಿಕೊಂಡಿದ್ದು, ಆರೋಪಿಗಳು ವಿಚಾರಣೆ ಸಂದರ್ಭದಲ್ಲಿ ತಿಳಿಸಿರುವಂತೆ ಬೆಂಗಳೂರು ನಗರ ಮತ್ತು ತಾವರೆಕೆರೆ ಮಾಗಡಿ ರಸ್ತೆ ಕಡೆಗಳಲ್ಲಿ ಇನ್ನಷ್ಟು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿರುವ ಸಾಧ್ಯತೆ ಇದ್ದು ಪ್ರಕರಣದಲ್ಲಿ ಹೆಚ್ಚಿನ ತನಿಖೆತನಡೆಯುತ್ತಿದೆ.
ಬೆಂಗಳೂರು ನಗರ ದಕ್ಷಿಣ ವಿಭಾಗದ ಉಪ-ಪೊಲೀಸ್ ಆಯುಕ್ತರಾದ ಪಿ.ಕೃಷ್ಣಕಾಂತ್, ಐ.ಪಿ.ಎಸ್ ಮತ್ತು ಜಯನಗರ ಉಪ-ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಕೆ.ವಿ.ಶ್ರೀನಿವಾಸ್ ರವರ ಮಾರ್ಗದರ್ಶನದಲ್ಲಿ ಬಸವನಗುಡಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಕ ಸುಬ್ರಹ್ಮಣ ಸ್ವಾಮಿ.ಎಂ.ಎಲ್ ನೇತೃತ್ವದಲ್ಲಿ ಸಬ್ ಇನ್ಸ್‌ಕ್ಟರ್ ಮಂಜುನಾಥ ಎನ್.ವಿ. ಕಗೂ ಸಿಬ್ಬಂದಿಗಳಾದ ರಮೇಶ.ಎನ್, ಕಿರಣ್, ಸಂತೋಷ್ ಮತ್ತು ಮಾರ್ಥವಿಜಯ ರವರುಗಳ ತಂಡ ಕಾರ್ಯಾಚರಣೆಯಲ್ಲಿ ಪಾಲ್ಗೊಂಡು ಪ್ರಕರಣವನ್ನು ಪತ್ತೆ ಮಾಡುವಲ್ಲಿ ಯಶಸ್ವಿಯಾಗಿರುತ್ತಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw
ವಿಡಿಯೋ ನೋಡಿ:





























