ತ್ರಿಪುರಾದಲ್ಲಿ ಅಧಿವೇಶನದಲ್ಲಿ ಬಿಜೆಪಿ ಶಾಸಕನಿಂದ ಬ್ಲ್ಯೂ ಚಿತ್ರ ವೀಕ್ಷಣೆಯಂತೆ: ವಿಧಾನಸಭೆಯೊಳಗೆ ಗಂಗಾಜಲ ಸಿಂಪಡಿಸಿದ ಕಾಂಗ್ರೆಸ್ ಶಾಸಕರು..!
ತ್ರಿಪುರಾದಲ್ಲಿ ಅಧಿವೇಶನ ನಡೆಯುತ್ತಿದ್ದ ವೇಳೆ ಬಿಜೆಪಿ ಶಾಸಕರೋರ್ವರು ಅಶ್ಲೀಲ ಚಿತ್ರ ನೋಡಿದ ಘಟನೆ ನಡೆದಿದೆ. ಇದರಿಂದ ವಿಧಾನಸಭೆ ಅಶುದ್ಧವಾಗಿದೆ ಎಂದು ಕಾಂಗ್ರೆಸ್ ಶಾಸಕರು ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ತ್ರಿಪುರಾ ವಿಧಾನಸಭೆಯ ಬಜೆಟ್ ಅಧಿವೇಶನ ಶುರುವಾಗುವ ಮುನ್ನ, ಕಾಂಗ್ರೆಸ್ ಶಾಸಕ ಸುದೀಪ್ ರಾಯ್ ಬರ್ಮನ್ ರಾಜ್ಯ ವಿಧಾನಸಭೆಯೊಳಗೆ ಗಂಗಾಜಲ ಸಿಂಪಡಿಸಿದ ಘಟನೆ ನಡೆಯಿತು.
ಹಿರಿಯ ಕಾಂಗ್ರೆಸ್ ಶಾಸಕ ಸುದೀಪ್ ರಾಯ್ ಬರ್ಮನ್ ಅವರು ಇಂದು ಸದನದಲ್ಲಿ ಗಂಗಾಜಲವನ್ನು ಸುರಿದಿದ್ದಾರೆ.
ವಿಧಾನಸಭೆ ಅಧಿವೇಶನದ ವೇಳೆ ಅಶ್ಲೀಲ ಚಿತ್ರಗಳನ್ನು ವೀಕ್ಷಿಸಿದ ಬಿಜೆಪಿ ಶಾಸಕ ಜದಾಬ್ ಲಾಲ್ ನಾಥ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ವಿಪಕ್ಷ ಶಾಸಕರು ಪಟ್ಟು ಹಿಡಿದು ಪ್ರತಿಭಟನೆ ನಡೆಸಿದ್ದು, ಅಸೆಂಬ್ಲಿಯಿಂದ ಐವರು ಶಾಸಕರನ್ನು ಅಮಾನತುಗೊಳಿಸಲಾಗಿದೆ.
ಬಿಜೆಪಿ ಶಾಸಕ ಜದಾಬ್ ಲಾಲ್ ನಾಥ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಪಕ್ಷ ನಾಯಕರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw




























