ರಾಮಾಪುರ ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕನ ಮೇಲೆ ಹಲ್ಲೆ : ಚಿಕಿತ್ಸೆ ಫಲಕಾರಿಯಾಗದೆ ಯುವಕ ಸಾವು - Mahanayaka
5:00 PM Thursday 23 - October 2025

ರಾಮಾಪುರ ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕನ ಮೇಲೆ ಹಲ್ಲೆ : ಚಿಕಿತ್ಸೆ ಫಲಕಾರಿಯಾಗದೆ ಯುವಕ ಸಾವು

chamarajanagara
08/07/2023

ಹನೂರು : ಸಂಬಂಧಿಕರ ನಡುವೆ ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಗಲಾಟೆಯಲ್ಲಿ ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ಶುಕ್ರವಾರ ಬೆಳಗ್ಗೆ ಬೆಳಕಿಗೆ ಬಂದಿದೆ.

ಹನೂರು ತಾಲೂಕಿನ ರಾಮಾಪುರ ಗ್ರಾಮದ ಡಾ.ಬಿ.ಆರ್.ಅಂಬೇಡ್ಕರ್ ಬಡಾವಣೆಯ ವೆಂಕಟೇಶ ಮೃತ ಪಟ್ಟಿರುವ ವ್ಯಕ್ತಿ ಎಂದು ಗುರುತಿಸಲಾಗಿದೆ

ಘಟನೆ ವಿವರ: ಗುರುವಾರ ತಡರಾತ್ರಿ ರಾಮಪುರ ಗ್ರಾಮದ ಮೃತ ವೆಂಕಟೇಶ್ ರವರ ಚಿಕ್ಕಮ್ಮನ ಮಗ ಶಶಿಕುಮಾರ್ ಹಾಗೂ ವೆಂಕಟೇಶ ನಡುವೆ ಹಣಕಾಸಿನ ವಿಚಾರಕ್ಕೆ ಗಲಾಟೆ ಆಗಿದೆ ಎನ್ನಲಾಗಿದೆ .ಬಳಿಕ ಜಗಳದಲ್ಲಿ ವೆಂಕಟೇಶಗೆ ಪೆಟ್ಟು ಬಿದ್ದ ಹಿನ್ನಲೆ ಚಾಮರಾಜನಗರ ಜಿಲ್ಲಾ ಆಸ್ಪತ್ರೆಗೆ ಚಿಕಿತ್ಸೆಗೆ ರವಾನಿಸಲಾಗಿತ್ತು. ಆದರೆ ಶುಕ್ರವಾರ ಬೆಳಗ್ಗೆ ಗಾಯಾಗೊಂಡಿದ್ದ ವೆಂಕಟೇಶ್ ಮೃತ ಪಟ್ಟಿದ್ದಾನೆ ಎಂದು ಪೊಲೀಸರಿಂದ ತಿಳಿದುಬಂದಿದೆ.

ಈ ಸಂಬಂಧ ರಾಮಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಮುಂದಿನ ಕ್ರಮಕೈಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು ಹಾಗೂ ಕೊಳ್ಳೇಗಾಲ ಡಿವೈಎಸ್‌ಪಿ ಸೋಮೇಗೌಡ ಸೇರಿದಂತೆ ಸಿಬ್ಬಂಧಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ