ಲೈಂಗಿಕ ಕಿರುಕುಳದ ಸುಳ್ಳು ಆರೋಪ ಹೊರಿಸಿ ದಲಿತ ಯುವಕರಿಗೆ ಮಲ ತಿನ್ನಿಸಿದ ಪಾಪಿಗಳು! - Mahanayaka

ಲೈಂಗಿಕ ಕಿರುಕುಳದ ಸುಳ್ಳು ಆರೋಪ ಹೊರಿಸಿ ದಲಿತ ಯುವಕರಿಗೆ ಮಲ ತಿನ್ನಿಸಿದ ಪಾಪಿಗಳು!

madhya pradesh
08/07/2023


Provided by

ಭೋಪಾಲ್: ಶೋಷಿತ ಸಮುದಾಯದ ಇಬ್ಬರು ಯುವಕರ ಮೇಲೆ ಲೈಂಗಿಕ ದೌರ್ಜನ್ಯದ ಸುಳ್ಳು ಆರೋಪ ಹೊರಿಸಿ, ಬಲವಂತವಾಗಿ ಮಲ ತಿನ್ನಿಸಿದ ಅನಾಗರಿಕ ಘಟನೆಯೊಂದು ಮಧ್ಯಪ್ರದೇಶದ ಶಿವಪುರಿಯಲ್ಲಿ ನಡೆದಿದೆ.

ಜೂನ್ 30ರಂದು  ಮಧ್ಯಪ್ರದೇಶದ ಶಿವಪುರಿ ಜಿಲ್ಲೆಯ ವರ್ಖಾಡಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ವಿಡಿಯೋ ವೈರಲ್ ಆದ ಬೆನ್ನಲ್ಲೇ ದುಷ್ಕೃತ್ಯ ಬೆಳಕಿಗೆ ಬಂದಿದೆ.

ಘಟನೆಗೆ ಸಂಬಂಧಿಸಿದಂತೆ ಒಂದೇ ಕುಟುಂಬದ ಅಜ್ಮತ್ ಖಾನ್, ವಕೀಲ್ ಖಾನ್, ಆರಿಫ್ ಖಾನ್, ಶಾಹಿತ್ ಖಾನ್, ಇಸ್ಲಾಮ್ ಖಾನ್, ರಹಿಶಾ ಬಾನು ಮತ್ತು ಸೈನಾ ಬಾನು ಎಂಬವರನ್ನು ಪೊಲೀಸರು ಬಂಧಿಸಿದ್ದು, ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಿ, ಜೈಲಿಗೆ ಕಳುಹಿಸಲಾಗಿದೆ.

ಆರೋಪಿಗಳ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್ ಎಸ್ ಐ) ಅಡಿ ಪ್ರಕರಣ ದಾಖಲಿಸಲು ಹಾಗೂ ಈ ಕುಟುಂಬ ಅಕ್ರಮವಾಗಿ ನಿರ್ಮಿಸಿದ್ದ ಆಸ್ತಿಗಳನ್ನು ಕೆಡವಲು ಶಿವಪುರಿ ಸ್ಥಳೀಯಾಡಳಿತಕ್ಕೆ ಸೂಚನೆ ನೀಡಲಾಗಿದೆ ಎಂದು  ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಹೇಳಿದ್ದಾರೆ.

ಈ ಕುಟುಂಬವು ಆಸ್ತಿ ಸಂಬಂಧಿತ ವಿವಾದಕ್ಕೆ ಸಂಬಂಧಿಸಿದಂತೆ, ಯುವಕರ ಮೇಲೆ ಲೈಂಗಿಕ ಕಿರುಕುಳದ ಆರೋಪವನ್ನು ಕುಟುಂಬ ಮಾಡಿದೆ ಎಂದು ಸ್ಥಳೀಯ ಪೊಲೀಸರು ತನಿಖೆಯ ನಂತರ ಹೇಳಿದ್ದಾರೆ. ಘಟನೆಯನ್ನು ಗೃಹ ಸಚಿವ ನರೋತ್ತಮ್ ಮಿಶ್ರಾ ಖಂಡಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ