ಪಂಜಾಬ್ ಮಾಜಿ ಉಪ ಮುಖ್ಯಮಂತ್ರಿ ಒ.ಪಿ.ಸೋನಿ ಅರೆಸ್ಟ್: ಡಿಸಿಎಂ ಬಂಧನಕ್ಕೆ ಕಾರಣ ಏನ್ ಗೊತ್ತಾ..? - Mahanayaka

ಪಂಜಾಬ್ ಮಾಜಿ ಉಪ ಮುಖ್ಯಮಂತ್ರಿ ಒ.ಪಿ.ಸೋನಿ ಅರೆಸ್ಟ್: ಡಿಸಿಎಂ ಬಂಧನಕ್ಕೆ ಕಾರಣ ಏನ್ ಗೊತ್ತಾ..?

09/07/2023

2016 ರಿಂದ 2022 ರ ನಡುವೆ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಸಂಪಾದಿಸಿದ ಆರೋಪದ ಮೇಲೆ ಪಂಜಾಬ್ ಮಾಜಿ ಉಪಮುಖ್ಯಮಂತ್ರಿ ಒಪಿ ಸೋನಿ ಅವರನ್ನು ಪಂಜಾಬ್ ವಿಜಿಲೆನ್ಸ್ ಬ್ಯೂರೋ (ವಿಬಿ) ಭಾನುವಾರ ಬಂಧಿಸಿದೆ.

ಅವರನ್ನು ನಾಳೆ ಅಮೃತಸರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಆದೇಶದ ಮೇರೆಗೆ ಭ್ರಷ್ಟಾಚಾರದ ವಿರುದ್ಧ ನಡೆಯುತ್ತಿರುವ ಅಭಿಯಾನದ ಮಧ್ಯೆ ಈ ಕ್ರಮ ಕೈಗೊಳ್ಳಲಾಗಿದೆ.

ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 13 (1) (ಬಿ) ಮತ್ತು 13 (2) ಅಡಿಯಲ್ಲಿ ಒಪಿ ಸೋನಿ ವಿರುದ್ಧ ಅಮೃತಸರ ವಲಯದ ವಿಬಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ವಿಬಿಯ ಅಧಿಕೃತ ವಕ್ತಾರರು ತಿಳಿಸಿದ್ದಾರೆ. ಅಕ್ಟೋಬರ್ 10, 2022 ರಂದು ತನಿಖೆಗೆ ಆದೇಶಿಸಿದ ನಂತರ ಎಫ್ಐಆರ್ ದಾಖಲಿಸಲಾಗಿದೆ.

ಏಪ್ರಿಲ್ 1, 2016 ರಿಂದ ಮಾರ್ಚ್ 31, 2022 ರ ಅವಧಿಯಲ್ಲಿ, ಮಾಜಿ ಉಪಮುಖ್ಯಮಂತ್ರಿ ಮತ್ತು ಅವರ ಕುಟುಂಬದ ಆದಾಯ 4.52 ಕೋಟಿ ರೂಪಾಯಿ ಇತ್ತು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ