ರಾಹುಲ್ ಗಾಂಧಿ ಅವರ ರಾಜಕೀಯ ಜೀವನ ಮುಗಿಸಲು ಕೇಂದ್ರ ಪಿತೂರಿ: ಕಾಂಗ್ರೆಸ್ ಮೌನ ಪ್ರತಿಭಟನೆ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ರಾಜಕೀಯ ಜೀವನ ಮುಗಿಸಲು ಕೇಂದ್ರ ಸರಕಾರ ಪಿತೂರಿ ರೂಪಿಸುವ ಮೂಲಕ ದ್ವೇಷ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ಇಂದು ಮಂಗಳೂರು ನಗರದಲ್ಲಿ ಮೌನ ಪ್ರತಿಭಟನೆ ನಡೆಸಲಾಯಿತು.
ಮಂಗಳೂರು ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿ ಮತ್ತು ಮಂಗಳೂರು ನಗರ ಸಮಿತಿಯ ನೇತೃತ್ವದಲ್ಲಿ ನಗರದ ಪುರಭವನದ ಎದುರಿನ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಯಿತು. ಮಾಜಿ ಶಾಸಕ ಜೆ.ಆರ್.ಲೋಬೊ ನೇತೃತ್ವದಲ್ಲಿ ನಡೆಯುತ್ತಿರುವ ಮಹಾತ್ಮ ಗಾಂಧಿ ಪ್ರತಿಮೆಗೆ ಹಾರಾರ್ಪಣೆ ಮಾಡುವ ಮೂಲಕ ಪ್ರತಿಭಟನೆಗೆ ಚಾಲನೆ ನೀಡಲಾಯಿತು. ಉತ್ತರ ಪ್ರದೇಶದ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ, ಮಾಜಿ ಸಚಿವ ನಕುಲ್ ದುಬೆ ಸಹಿತ ಹಲವಾರು ಸ್ಥಳೀಯ ಕಾಂಗ್ರೆಸ್ ಮುಖಂಡರು ಭಾಗವಹಿಸಿದ್ದರು.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw