ಚಿರತೆ ದಾಳಿಗೊಳಗಾಗಿದ್ದ ಬಾಲಕಿ ಸಾವು: 18 ದಿನಗಳಾದರೂ ಬೋನಿಗೆ ಬೀಳದ ಚಿರತೆ - Mahanayaka

ಚಿರತೆ ದಾಳಿಗೊಳಗಾಗಿದ್ದ ಬಾಲಕಿ ಸಾವು: 18 ದಿನಗಳಾದರೂ ಬೋನಿಗೆ ಬೀಳದ ಚಿರತೆ

chamarajanagara
15/07/2023

ಚಾಮರಾಜನಗರ: ಮನೆಮುಂದೆಯೇ ಚಿರತೆ ದಾಳಿಗಾಗಿ ಚಿಕಿತ್ಸೆ ಪಡೆಯುತ್ತಿದ್ದ ಹನೂರು ತಾಲೂಕಿನ ಕಗ್ಗಲಿಗುಂದಿ ಗ್ರಾಮದ ಬಾಲಕಿ ಸುಶೀಲ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.

ಕಳೆದ ಜೂ‌. 26 ರಂದು ಮನೆಯ ಮುಂಭಾಗ ಆಟವಾಡುತ್ತಿದ್ದ ಸುಶೀಲಾ ಮೇಲೆ ಚಿರತೆ ದಾಳಿ ನಡೆಸಿ ಹೊತ್ತೊಯ್ಯುವ ಪ್ರಯತ್ನ ನಡೆಸಿತ್ತು. ಇದರ ಪರಿಣಾಮ, ತೀವ್ರವಾಗಿ ಗಾಯಗೊಂಡು  ಮೈಸೂರಿನ ಚೆಲುವಂಬ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ದವಡೆ ಮೂಳೆ ಮುರಿದಿದ್ದ ಪರಿಣಾಮ ಮುಖ ಊದಿಕೊಂಡಿತ್ತು.  ಕಳೆದ 14 ದಿನಗಳಿಂದ ಚಿಕಿತ್ಸೆ ನೀಡಲಾಗುತ್ತಿತ್ತು. ಜು‌. 11ರಂದು ಆಪರೇಷನ್ ಕೂಡ ಮಾಡಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೇ ಬಾಲಕಿ ಅಸುನೀಗಿದ್ದಾಳೆ.

ಇನ್ನು, ಚಿರತೆ ದಾಳಿ ಪ್ರಕರಣ ನಡೆದು ಸುಮಾರು 14 ದಿನಗಳು ಕಳೆದಿದೆ. ಚಿರತೆ ಸೆರೆಗಾಗಿ ಚಿರತೆ ದಾಳಿ ನಡೆಸಿದ ಸ್ಥಳ ಹಾಗೂ ಅಕ್ಕಪಕ್ಕದಲ್ಲಿ ಮೂರು ಬೋನ್ ಗಳನ್ನು ಸಹ ಇಡಲಾಗಿತ್ತು .ಆದರೆ ಇದುವರೆಗೂ ಚಿರತೆಯನ್ನು ಹಿಡಿಯುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ