ತಿರುಪತಿ ತಿಮ್ಮಪ್ಪನಿಗೆ ಬಂಗಾರದ ಶಂಖವನ್ನು ಕಾಣಿಕೆ ನೀಡಿದ ನಾರಾಯಣಮೂರ್ತಿ ಹಾಗೂ ಸುಧಾಮೂರ್ತಿ

ಇನ್ಫೋಸಿಸ್ ಸಂಸ್ಥೆ ಮುಖ್ಯಸ್ಥರಾದ ನಾರಾಯಣಮೂರ್ತಿ ಹಾಗೂ ಸುಧಾಮೂರ್ತಿ ದಂಪತಿ ತಿರುಪತಿ ಗಿರಿವಾಸನಾದ ಶಂಖಚಕ್ರಧಾರಿ ತಿಮ್ಮಪ್ಪನಿಗೆ ಬಂಗಾರದ ಶಂಖವನ್ನು ಕಾಣಿಕೆ ನೀಡಿದ್ದಾರೆ.
ನಾರಾಯಣಮೂರ್ತಿ ಹಾಗೂ ಸುಧಾಮೂರ್ತಿ ದಾಂಪತ್ಯ ಜೀವನಕ್ಕೆ ನಲವತ್ತೈದು ವರ್ಷ ತುಂಬಿದೆ. ಈ ಹಿನ್ನೆಲೆಯಲ್ಲಿ ಈ ನಲವತ್ತು ವರ್ಷಗಳಲ್ಲಿ ತಮ್ಮ ಬಳಿ ಇದ್ದ ಕೆಲವೇ ಕೆಲವು ಆಭರಣಗಳಿಂದ ಈ ಬಂಗಾರದ ಶಂಖವನ್ನು ಮಾಡಿಸಿ ತಿಮ್ಮಪ್ಪನಿಗೆ ನೀಡಿದ್ದಾರೆ.
ಇನ್ಫೋಸಿಸ್ ಫೌಂಡೇಶನ್ ಮೂಲಕ ಸುಧಾಮೂರ್ತಿ ಸಾಕಷ್ಟು ಸಾಮಾಜಿಕ ಹಾಗೂ ಧಾರ್ಮಿಕ ಕೆಲಸಗಳನ್ನು ಮಾಡುತ್ತಾ ಬಂದಿದ್ದಾರೆ. ನಾರಾಯಣಮೂರ್ತಿ ಹಾಗೂ ಸುಧಾಮೂರ್ತಿ ದಂಪತಿ ಮೊದಲಿನಿಂದಲೂ ಸರಳ ಜೀವನ ನಡೆಸುತ್ತಾ ಅನೇಕರಿಗೆ ಮಾದರಿಯಾಗಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw