ದ್ವಿಚಕ್ರ ವಾಹನ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ: 3 ವಾಹನ ವಶ - Mahanayaka
10:18 AM Tuesday 18 - November 2025

ದ್ವಿಚಕ್ರ ವಾಹನ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ: 3 ವಾಹನ ವಶ

baike
17/07/2023

ಬೆಂಗಳೂರು ನಗರ, ಪಶ್ಚಿಮ ವಿಭಾಗ, ಚಿಕ್ಕಪೇಟೆ ಉಪ ವಿಭಾಗ ಕಲಾಸಿಪಾಳ್ಯ ಪೊಲೀಸ್ ಠಾಣೆ ಪೊಲೀಸರು ದ್ವಿಚಕ್ರ ವಾಹನ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿ ಆರೋಪಿತರಿಂದ ಸುಮಾರು 1,50,000 ಮೌಲ್ಯದ 3 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.

ಕಲಾಸಿಪಾಳ್ಯ ಪೊಲೀಸ್ ಠಾಣಾ ಸರಹದ್ದಿನ ಊರ್ವಶಿ ಥಿಯೇಟರ್ ಮುಂಭಾಗದಲ್ಲಿ ನಿಲ್ಲಿಸಿದ್ದ ಹೊಂಡಾ ಆಕ್ಟಿವಾ ದ್ವಿಚಕ್ರ ವಾಹನವನ್ನು ಯೊರೋ ಕಳ್ಳರು ಕಳ್ಳತನ ಮಾಡಿರುವ ಬಗ್ಗೆ ಹರೀಶ್ ರಾಜ್ ಎಂಬುವವರು ನೀಡಿದ ದೂರಿನ ಮೇರೆಗೆ, ಕಲಾಸಿಪಾಳ್ಯ ಪೊಲೀಸ್ ಠಾಣೆಯಲ್ಲಿ ಕಳವು ಪ್ರಕರಣ ದಾಖಲಿಸಿಕೊಂಡು, ಕಾರ್ಯಪ್ರವೃತ್ತರಾಗಿ ಬಾತ್ಮಿದಾರರ ಖಚಿತ ಮಾಹಿತಿಯ ಮೇರೆಗೆ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು ಅವರನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಿದಾಗ, ಆರೋಪಿಗಳು ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡಿರುವ ಮಾಹಿತಿಯನ್ನು ನೀಡಿದ್ದಾರೆ.

ಅವರಿಂದ 3 ದ್ವಿಚಕ್ರ ವಾಹನಗಳನ್ನು ವಶ ಪಡಿಸಿಕೊಂಡಿದ್ದು, ಇದರಿಂದ ಕಲಾಸಿಪಾಳ್ಯ ಪೊಲೀಸ್ ಠಾಣೆಯ 2 ಪ್ರಕರಣಗಳು ಹಾಗೂ ಮತ್ತೊಂದು ವಾಹನಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರೆದಿರುತ್ತದೆ.
ಈ ಕಾರ್ಯಚರಣೆಯನ್ನು ಪಶ್ಚಿಮ ವಿಭಾಗದ ಉಪ ಪೊಲೀಸ್ ಆಯುಕ್ತ ಡಾ: ಲಕ್ಷ್ಮಣ ಬಿ ನಿಂಬರಗಿ ಮತ್ತು ಚಿಕ್ಕಪೇಟೆ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಭರತ್ ಎಸ್ ರೆಡ್ಡಿ ಮಾರ್ಗದರ್ಶನದಲ್ಲಿ ಕಲಾಸಿಪಾಳ್ಯ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಎ.ಜಿ.ಮಂಜೇಗೌಡ ರವರ ನೇತೃತ್ವದ ಸಿಬ್ಬಂದಿಯವರ ತಂಡ ಕಾರ್ಯಾಚರಣೆಯನ್ನು ಕೈಗೊಂಡು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ