ಭೀಕರ ರಸ್ತೆ ಅಪಘಾತಕ್ಕೆ ಸ್ಕೂಟರ್ ಸವಾರ ಬಲಿ

ಮಂಗಳೂರು ನಗರ ಹೊರವಲಯದ ಪಣಂಬೂರಿನಲ್ಲಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದ ರಸ್ತೆ ಅಪಘಾತಕ್ಕೆ ಸ್ಕೂಟರ್ ಸವಾರರೊಬ್ಬರು ಬಲಿಯಾಗಿದ್ದಾರೆ.
ಸ್ಕೂಟರ್ ಚಲಾಯಿಸಿಕೊಂಡು ಹೋಗುತ್ತಿದ್ದಾಗ ರಸ್ತೆಯ ಹೊಂಡಕ್ಕೆ ಬಿದ್ದಿದ್ದು, ಈ ಸಂದರ್ಭದಲ್ಲಿ ಸವಾರನೂ ರಸ್ತೆಗೆ ಬಿದ್ದಿದ್ದಾರೆ.
ಇದೇ ವೇಳೆ ಹಿಂಬದಿಯಿಂದ ಬಂದ ಸರಕು ತುಂಬಿದ ಲಾರಿ ರಸ್ತೆಯಲ್ಲಿ ಬಿದ್ದಿದ್ದ ಸ್ಕೂಟರ್ ಮತ್ತು ಸವಾರನ ಮೇಲೆ ಚಲಿಸಿದೆ.ಇದರಿಂದ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಮೃತ ಸ್ಕೂಟರ್ ಸವಾರನ ಗುರುತು ಪತ್ತೆಯಾಗಿಲ್ಲ.
ಮಂಗಳೂರು ನಗರ ಉತ್ತರ ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw