ಮೋದಿ, ಯೋಗಿ ಮೇಲೆ 26/11ರಂತೆ ಅಟ್ಯಾಕ್ ಮಾಡ್ತೇವೆ ಎಂದ ಅಪರಿಚಿತ ವ್ಯಕ್ತಿ: ಮುಂಬೈ ಪೊಲೀಸರಿಗೆ ಬಂತು ಬೆದರಿಕೆ ಕರೆ..!

ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಮೇಲೆ 26/11ರಂತೆ ದಾಳಿ ಮಾಡುವುದಾಗಿ ಮುಂಬೈ ಪೊಲೀಸರಿಗೆ ಕರೆಯೊಂದು ಬಂದಿದೆ.
ಕೆಲ ದಿನಗಳ ಹಿಂದಷ್ಟೇ ಮುಂಬೈ ಪೊಲೀಸರಿಗೆ ಬೆದರಿಕೆ ಕರೆಯೊಂದು ಬಂದಿತ್ತು. ಮಂಗಳವಾರ ಬಂದಿರುವ ಈ ಕರೆಯಲ್ಲಿ ದೇಶದ ಇಬ್ಬರು ಮಹಾನ್ ನಾಯಕರನ್ನು ಗುರಿ ಇಟ್ಟುಕೊಂಡು ಮುಂಬಯಿ ದಾಳಿಯಂತೆ ಮತ್ತೊಮ್ಮೆ ದಾಳಿ ಮಾಡಲಾಗುವುದು ಎಂದು ಅಪರಿಚಿತ ವ್ಯಕ್ತಿ ಬೆದರಿಸಿದ್ದಾನೆ.
ಈಗ ಕರೆ ಮಾಡಿರುವ ಅಪರಿಚಿತ ವ್ಯಕ್ತಿ, ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೇ ನಮ್ಮ ಟಾರ್ಗೆಟ್ ಎಂದು ತಿಳಿಸಿದ್ದಾನೆ.
ಆನ್ ಲೈನ್ ಗೇಮ್ ಮೂಲಕ ಪರಿಚಯವಾದ ಗೆಳೆಯನನ್ನು ಹುಡುಕಿಕೊಂಡು ಪಾಕಿಸ್ತಾನದಿಂದ ನಾಲ್ವರು ಮಕ್ಕಳೊಂದಿಗೆ ಬಂದ ಮಹಿಳೆ ಸೀಮಾ ಹೈದರ್ ಮತ್ತೆ ಪಾಕಿಸ್ತಾನಕ್ಕೆ ತೆರಳಲು ಹಿಂದೇಟು ಹಾಕುತ್ತಿದ್ದಾರೆ. ಹೀಗಾಗಿ ಪಾಕಿಸ್ತಾನದಿಂದ ಎಂದು ಹೇಳಲಾದ ಈ ಕರೆಯಲ್ಲಿ ಸೀಮಾಳನ್ನು ಆಕೆಯ ತಾಯ್ನಾಡು ಪಾಕಿಸ್ತಾನಕ್ಕೆ ವಾಪಸ್ ಕಳುಹಿಸಿ ಕೊಡದಿದ್ದರೆ ಮತ್ತೊಂದು ಭಯೋತ್ಪಾದನಾ ದಾಳಿಯನ್ನು ಎದುರಿಸಲು ಸಜ್ಜಾಗಿ ಎಂದು ಹೇಳಲಾಗಿದೆ.
ಈ ಕುರಿತು ತನಿಖೆ ನಡೆಸಿದ್ದ ಪೊಲೀಸರಿಗೆ ಇದೊಂದು ಹುಸಿ ಬಾಂಬ್ ಕರೆ ಎಂಬುದು ಬಯಲಾಯಿತು. ಕರೆ ಮಾಡಿರುವ ಅಪರಿಚಿತ ವ್ಯಕ್ತಿಯ ವಿರುದ್ಧ ಮುಂಬೈ ಪೊಲೀಸರು ಐಪಿಸಿ ಸೆಕ್ಷನ್ 509 (2)ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 7483551849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw