ಅಕ್ರಮ ಹಣ ವರ್ಗಾವಣೆ ಕೇಸ್: ಸುಪ್ರೀಂ ಮೆಟ್ಟಿಲೇರಿದ ತಮಿಳುನಾಡು ಸಚಿವ ಸೆಂಥಿಲ್ - Mahanayaka

ಅಕ್ರಮ ಹಣ ವರ್ಗಾವಣೆ ಕೇಸ್: ಸುಪ್ರೀಂ ಮೆಟ್ಟಿಲೇರಿದ ತಮಿಳುನಾಡು ಸಚಿವ ಸೆಂಥಿಲ್

18/07/2023


Provided by

ಅಕ್ರಮ ಹಣ ವರ್ಗಾವಣೆ ಕೇಸ್ ನಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿರುವ ತಮಿಳುನಾಡು ಸಚಿವ ವಿ ಸೆಂಥಿಲ್ ಬಾಲಾಜಿ ಅವರು ಮದ್ರಾಸ್ ಹೈಕೋರ್ಟ್‌ನ ಭಿನ್ನ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಸೆಂಥಿಲ್ ಬಾಲಾಜಿ ಅವರ ಬಂಧನಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನ್ಯಾಯಮೂರ್ತಿಗಳಾದ ನಿಶಾ ಬಾನು ಮತ್ತು ಡಿ ಭರತ ಚಕ್ರವರ್ತಿ ಅವರು ವಿಭಿನ್ನ ತೀರ್ಪು ನೀಡಿದ್ದರು. ನ್ಯಾಯಮೂರ್ತಿ ನಿಶಾ ಬಾನು ಅವರು ಬಾಲಾಜಿ ಬಿಡುಗಡೆಗಾಗಿ ಸಲ್ಲಿಸಲಾದ ಹೇಬಿಯಸ್ ಕಾರ್ಪಸ್ ಮನವಿ ಸಮರ್ಥನೀಯವಾಗಿದೆ. ಅವರನ್ನು ಬಿಡುಗಡೆ ಮಾಡಬಹುದು ಎಂದು ಹೇಳಿದ್ದರು. ಆದರೆ ನ್ಯಾಯಮೂರ್ತಿ ಡಿ ಭರತ ಚಕ್ರವರ್ತಿ ಅವರು ನ್ಯಾಯಮೂರ್ತಿ ಬಾನು ಅವರ ಅಭಿಪ್ರಾಯವನ್ನು ಒಪ್ಪಲು ಸಾಧ್ಯವಿಲ್ಲ. ಎದೆನೋವಿಗೆ ಚಿಕಿತ್ಸೆ ಪಡೆಯುತ್ತಿರುವ ಬಾಲಾಜಿ ಆಸ್ಪತ್ರೆಯಲ್ಲಿರುವಷ್ಟು ದಿನ ಇಡಿ ಕಸ್ಟಡಿಯಿಂದ ಹೊರಗಿರಲಿದ್ದಾರೆ. ಅಷ್ಟರೊಳಗೆ ಬಾಲಾಜಿ ಫಿಟ್ ಆಗಿದ್ದರೆ ಹತ್ತು ದಿನಗಳಲ್ಲಿ ಮತ್ತೆ ಇಡಿ ಕಸ್ಟಡಿಗೆ ತೆರಳಬಹುದು ಎಂದು ಹೇಳಿದ್ದರು. ಸೆಂಥಿಲ್ ಬಾಲಾಜಿ ಹಾಗೂ ಅವರ ಪತ್ನಿ ಮೇಗಾಲಾ ಕೂಡ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಉದ್ಯೋಗಕ್ಕಾಗಿ ಹಣ ಹಗರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ(ಪಿಎಂಎಲ್‌ಎ) ಅಡಿಯಲ್ಲಿ ಜಾರಿ ನಿರ್ದೇಶನಾಲಯ ಜೂನ್ 14 ರಂದು ತಮಿಳುನಾಡು ಸಚಿವರನ್ನು ಬಂಧಿಸಿತ್ತು. ಆದಾಗ್ಯೂ, ಇಡಿ ದಾಳಿಯ ಸಮಯದಲ್ಲಿ ಅವರು ಅಸ್ವಸ್ಥಗೊಂಡಿದ್ದರಿಂದ ಚೆನ್ನೈನ ಒಮಂದೂರಾರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

 

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ