ಚಿಟ್ ಫಂಡ್ ಪ್ರಕರಣ: ಟಿಎಂಸಿ‌ ಜತೆ ಸಂಪರ್ಕ ಇದ್ದ ಟಿವಿ ಚಾನೆಲ್ ಮುಖ್ಯಸ್ಥನನ್ನು ಬಂಧಿಸಿದ ತನಿಖಾ ಸಂಸ್ಥೆ - Mahanayaka
6:29 PM Saturday 18 - October 2025

ಚಿಟ್ ಫಂಡ್ ಪ್ರಕರಣ: ಟಿಎಂಸಿ‌ ಜತೆ ಸಂಪರ್ಕ ಇದ್ದ ಟಿವಿ ಚಾನೆಲ್ ಮುಖ್ಯಸ್ಥನನ್ನು ಬಂಧಿಸಿದ ತನಿಖಾ ಸಂಸ್ಥೆ

18/07/2023

ಚಿಟ್ ಫಂಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲ್ಕತಾ ಮೂಲದ 24×7 ಬಂಗಾಳಿ ಸುದ್ದಿ ಚಾನೆಲ್ ಕೋಲ್ಕತಾ ಟಿವಿಯ ಮುಖ್ಯಸ್ಥ ಕೌಸ್ತುವ್ ರಾಯ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿದೆ.
ಮೂಲಗಳ ಪ್ರಕಾರ, ರಾಯ್ ಅವರು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಉನ್ನತ ನಾಯಕರ ಜೊತೆಗೆ ಉತ್ತಮ ಸಂಪರ್ಕ ಹೊಂದಿದ್ದರು ಎನ್ನಲಾಗಿದೆ.
ರಾಯ್ ಅವರನ್ನು ಹಣಕಾಸು ತನಿಖಾ ಸಂಸ್ಥೆಯು ಅನೇಕ ಗಂಟೆಗಳ ಕಾಲ ವಿಚಾರಣೆ ನಡೆಸಿದ ನಂತರ ಅವರನ್ನು ಬಂಧಿಸಲಾಗಿದೆ.
ರಾಯ್ ಅವರು ಸಿಜಿಒ ಕಾಂಪ್ಲೆಕ್ಸ್‌ನಲ್ಲಿರುವ ಕೋಲ್ಕತಾ ಇಡಿ ಕಚೇರಿಯಲ್ಲಿ ಕಾಣಿಸಿಕೊಂಡಿದ್ದರು. ನಿರಂತರ ವಿಚಾರಣೆಯ ನಂತರ ಅವರನ್ನು ಬಂಧಿಸಲಾಗಿದೆ. ಕೇಂದ್ರ ತನಿಖಾ ಸಂಸ್ಥೆ ರಾಯ್ ಅವರ ಮೊಬೈಲ್ ಫೋನ್ ಅನ್ನು ಸಹ ವಶಪಡಿಸಿಕೊಂಡಿದೆ. ಅವರನ್ನು ಬುಧವಾರ ಕೋಲ್ಕತ್ತಾದ ಇಡಿ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ.
ಇದಕ್ಕೂ ಮುನ್ನ ರಾಯ್ ಅವರನ್ನು ಕೇಂದ್ರ ತನಿಖಾ ದಳ (ಸಿಬಿಐ) ಬಂಧಿಸಿತ್ತು. ಇಡಿ ಮತ್ತು ಆದಾಯ ತೆರಿಗೆ ಇಲಾಖೆ ಕಳೆದ ವರ್ಷ ಅವರ ಕಚೇರಿ ಮತ್ತು ನಿವಾಸದಲ್ಲಿ ಶೋಧ ನಡೆಸಿತ್ತು. ಹಣಕಾಸು ಅಕ್ರಮಗಳ ಆರೋಪದ ಮೇಲೆ ಉದ್ಯಮಿಯನ್ನು ಬಂಧಿಸಲಾಗಿದೆ ಎಂದು ಇಡಿ ಮೂಲಗಳು ತಿಳಿಸಿವೆ.


Provided by

 

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ