ಅಮರನಾಥ ಯಾತ್ರೆ ಕೈಗೊಂಡ ನಟಿ ಸಾರಾ ಅಲಿ‌ ಖಾನ್: ಪರ - ವಿರೋಧ ಚರ್ಚೆ ಬಲು ಜೋರು - Mahanayaka
12:04 PM Wednesday 22 - October 2025

ಅಮರನಾಥ ಯಾತ್ರೆ ಕೈಗೊಂಡ ನಟಿ ಸಾರಾ ಅಲಿ‌ ಖಾನ್: ಪರ – ವಿರೋಧ ಚರ್ಚೆ ಬಲು ಜೋರು

20/07/2023

ಬಾಲಿವುಡ್ ನಟಿ ಸಾರಾ ಅಲಿ ಖಾನ್ ಅವರು ಪವಿತ್ರ ಅಮರನಾಥ ಯಾತ್ರೆ ಕೈಗೊಂಡಿದ್ದಾರೆ. ಅದರ ವಿಡಿಯೋ ಸಾಮಾಜಿಕ ತಾಣದಲ್ಲಿ ವೈರಲ್ ಆಗಿದೆ.
ಹಿಂದೂ ದೇವಸ್ಥಾನಗಳಿಗೆ ಭೇಟಿ ನೀಡಿದಾಗ ಎಲ್ಲಾ ಟೀಕೆಗೆ ಗುರಿಯಾಗುವ ನಟಿ ಸಾರಾ ಅಲಿ ಖಾನ್ ಈ ಭಾರೀ ಭದ್ರತೆಯೊಂದಿಗೆ ಅಮರನಾಥ ದರ್ಶನ ಪಡೆದಿದ್ದು, ಭದ್ರತೆಯಲ್ಲಿ ನಡೆದುಕೊಂಡು ಹೋಗುತ್ತಿರುವ ನಟಿಯ ವಿಡಿಯೋ ಸದ್ಯ ವೈರಲ್ ಆಗಿದೆ.
‘ದೇವಸ್ಥಾನಗಳಿಗೆ ಭೇಟಿ ನೀಡಿದಾಗ ನಾನು ಶಾಂತಿಯನ್ನು ಕಂಡುಕೊಂಡಿದ್ದೇನೆ. ಮುಖ್ಯವಾದುದೇನೆಂದರೆ ನನ್ನ ಕೆಲಸ ಮಾತನಾಡಬೇಕಾಗಿದೆ. ನನ್ನನ್ನು ಟ್ರೋಲ್ ಮಾಡುತ್ತಿದ್ರೆ ನಾನು ತಲೆಕೆಡಿಸಿಕೊಳ್ಳುವುದಿಲ್ಲ’ ಎಂದು ಸಾರಾ ಪ್ರತಿಕ್ರಿಯಿಸಿದ್ದಾರೆ.
ಇತ್ತೀಚೆಗಷ್ಟೇ ಸಾರಾ ನಟನೆಯ ‘ಝರಾ ಹಟ್ಕೆ ಝರಾ ಬಜ್ಕೆ’ ಸಿನಿಮಾ ರಿಲೀಸ್ ಆಗಿದೆ. ಬಾಕ್ಸ್ ಆಫೀಸ್ ಗಳಿಕೆ ಕೂಡ ಚೆನ್ನಾಗಿದೆ. ಹೀಗಾಗಿ ಸಾರಾ ಜಮ್ಮು ಕಾಶ್ಮೀರಕ್ಕೆ ಭೇಟಿ ನೀಡಿ, ಅಮರನಾಥ ಯಾತ್ರೆ ಪೂರೈಸಿದ್ದಾರೆ. ಯಾತ್ರೆಯಲ್ಲಿ ಸಾರಾಳನ್ನು ಕಂಡ ಅಭಿಮಾನಿಗಳು ನಟಿ ಜೊತೆ ಫೋಟೋ ತೆಗೆಸಿಕೊಂಡು ಸಂಭ್ರಮಿಸಿದ್ದಾರೆ. ಕೆಲವರು ಅವರ ವಿಡಿಯೋ ಶೂಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ.

 

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/BnbLYSQaXK1Hate4P0Bt3B

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ