ಮಣಿಪುರ ಬೆತ್ತಲೆ ಮೆರವಣಿಗೆ ಖಂಡಿಸಿ ಚಾಮರಾಜನಗರದಲ್ಲಿ ಅರೆಬೆತ್ತಲೆ ಪ್ರತಿಭಟನೆ
ಚಾಮರಾಜನಗರ: ಮಣಿಪುರದಲ್ಲಿ ಮಹಿಳೆಯರ ಬೆತ್ತಲೆ ಮೆರವಣಿಗೆ ಖಂಡಿಸಿ ಚಾಮರಾಜನಗರದ ಜಿಲ್ಲಾಡಳಿತ ಭವನದ ಎದುರು ಕನ್ನಡಪರ ಹೋರಾಟಗಾರರು ಅರೆ ಬೆತ್ತಲೆ ಪ್ರತಿಭಟನೆ ನಡೆಸಿದರು.
ಚಾ.ರಂ.ಶ್ರೀನಿವಾಸಗೌಡ ನೇತೃತ್ವದಲ್ಲಿ ಜಿಲ್ಲಾಡಳಿತ ಭವನದ ಎದುರು ಜಮಾಯಿಸಿದ ಪ್ರತಿಭಟನಾಕಾರರು ಶರ್ಟ್ ಕಳಚಿ ಅರೆ ಬೆತ್ತಲೆಯಾಗಿ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದರು. ಮಣಿಪುರದ ಘಟನೆ ಇಡೀ ದೇಶವೆ ತಲೆತಗ್ಗಿಸುವಂತೆ ಮಾಡಿದೆ, ಅಮಾನವೀಯವಾಗಿ, ಅನಾಗರಿಕರಾಗಿ ಅಲ್ಲಿನ ಪುಂಡರು ನಡೆದುಕೊಂಡಿದ್ದಾರೆ ಎಂದು ಆಕ್ರೋಶ ಹೊರಹಾಕಿದರು.
ಮಹಿಳೆಯರರನ್ನು ಮೆರವಣಿಗೆ ಮಾಡಿದ ಎಲ್ಲಾ ಪುಂಡರನ್ನು ಸೆರೆಹಿಡಿದು ಮರಣದಂಡನೆ ಶಿಕ್ಷೆ ವಿಧಿಸಿಬೇಕು, ಈ ರೀತಿ ಘಟನೆ ಮರುಕಳಿಸದಂತೆ ಕ್ರಮ ವಹಿಸಬೇಕು, ಹಿಂಸಾಚಾರವನ್ನು ಕೂಡಲೇ ಕೇಂದ್ರ ಸರ್ಕಾರ ತಹಬದಿಗೆ ತರಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 7483551849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw



























