ಹಾಲು ಉತ್ಪಾದಕರಿಗೆ ಸಂತಸದ ಸುದ್ದಿ: ನಂದಿನಿ ಹಾಲಿನ ದರ ಲೀಟರ್ ಗೆ 3 ರೂ. ಏರಿಕೆ - Mahanayaka

ಹಾಲು ಉತ್ಪಾದಕರಿಗೆ ಸಂತಸದ ಸುದ್ದಿ: ನಂದಿನಿ ಹಾಲಿನ ದರ ಲೀಟರ್ ಗೆ 3 ರೂ. ಏರಿಕೆ

nandini
21/07/2023


Provided by

ಬೆಂಗಳೂರು: ನಂದಿನ ಹಾಲಿನ ದರವನ್ನು ಪ್ರತಿ ಲೀಟರ್ ಗೆ 3 ರೂಪಾಯಿಗಳಿಗೆ ಏರಿಕೆ ಮಾಡಲು ರಾಜ್ಯ ಸರ್ಕಾರ ಅನುಮತಿ ನೀಡಿದ್ದು, ಹಾಲು ಉತ್ಪಾದಕರಿಗೆ ಇದರಿಂದ ಅನುಕೂಲವಾಗಲಿದೆ.

ಪರಿಷ್ಕೃತ ದರವು ಆಗಸ್ಟ್ 1ರಿಂದ ಜಾರಿಗೆ ಬರಲಿದೆ.  ಕೆಎಂಎಫ್ ಪ್ರತಿ ಲೀಟರ್ ಗೆ 5 ರೂಪಾಯಿ ದರ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಆದ್ರೆ 3 ರೂಪಾಯಿ ಹೆಚ್ಚಳಕ್ಕೆ ಸಿಎಂ ಸಿದ್ದರಾಮಯ್ಯ ಒಪ್ಪಿಗೆ ಸೂಚಿಸಿದ್ದಾರಲ್ಲದೇ ಹೆಚ್ಚಳವಾದ 3 ರೂಪಾಯಿ ಹಾಲು ಉತ್ಪಾದಕರಿಗೆ ಸೇರಬೇಕು ಎಂದು ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ರಾಜ್ಯದಲ್ಲಿನ ಎಲ್ಲ ಹಾಲು ಒಕ್ಕೂಟಗಳು ಹಾಗೂ ಕೆಎಂಎಫ್‌ ಅಧ್ಯಕ್ಷರ ಸಭೆ ನಡೆಸಿದರು.  ಸಭೆಯಲ್ಲಿ ಕೆಎಂಎಫ್‌ ಅಧ್ಯಕ್ಷ ಭೀಮಾ ನಾಯ್ಕ, ಸಹಕಾರ ಸಚಿವ ಕೆ.ಎನ್. ರಾಜಣ್ಣ, ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್‌ ಸಹಕಾರ ಇಲಾಖೆ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್‌ ಪ್ರಸಾದ್‌, ಪಶುಸಂಗೋಪನಾ ಇಲಾಖೆ ಕಾರ್ಯದರ್ಶಿ ಸಲ್ಮಾ ಫಾಹಿಂ, ಕೆಎಂಎಫ್‌ ವ್ಯವಸ್ಥಾಪಕ ನಿರ್ದೇಶಕ ಜಗದೀಶ್‌, KMF ನಿರ್ದೇಶಕ ಹೆಚ್.ಡಿ.ರೇವಣ್ಣ ಭಾಗಿಯಾಗಿದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 7483551849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ