ಆ್ಯಂಟಿ ಕಮ್ಯುನಲ್ ವಿಂಗ್ ಗೆ ಡೋಂಟ್ ಕೇರ್: ಮಂಗಳೂರಿನಲ್ಲಿ ಮತ್ತೆ ಅನೈತಿಕ ಪೊಲೀಸ್ ಗಿರಿ - Mahanayaka

ಆ್ಯಂಟಿ ಕಮ್ಯುನಲ್ ವಿಂಗ್ ಗೆ ಡೋಂಟ್ ಕೇರ್: ಮಂಗಳೂರಿನಲ್ಲಿ ಮತ್ತೆ ಅನೈತಿಕ ಪೊಲೀಸ್ ಗಿರಿ

manglore
22/07/2023

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆ್ಯಂಟಿ ಕಮ್ಯುನಲ್ ವಿಂಗ್ ಆರಂಭವಾದ ಬಳಿಕವೂ ಮಂಗಳೂರು ನಗರದಲ್ಲಿ ಅನೈತಿಕ ಪೊಲೀಸ್ ಗಿರಿ ಘಟನೆ ನಡೆದಿರುವುದು ಬೆಳಕಿಗೆ ಬಂದಿದೆ.

ಮಂಗಳೂರಿನ ಪ್ರತಿಷ್ಠಿತ ಮೆಡಿಕಲ್ ಕಾಲೇಜೊಂದರ ವಿದ್ಯಾರ್ಥಿಗಳ ಮೇಲೆ ಅನೈತಿಕ ಪೊಲೀಸ್ ಗಿರಿ ಮಾಡಿರುವುದಾಗಿ ತಿಳಿದು ಬಂದಿದೆ. ಪಣಂಬೂರು ಬೀಚ್ ಗೆ ಬಂದಿದ್ದ ವಿದ್ಯಾರ್ಥಿಗಳನ್ನು ವೀಕ್ಷಿಸುತ್ತಿದ್ದ ಇಬ್ಬರು ಅಪರಿಚಿತರು ತಮ್ಮಮೊಬೈಲ್ ನಲ್ಲಿ ವಿದ್ಯಾರ್ಥಿಗಳ ಚಲನವಲನಗಳನ್ನು ಚಿತ್ರೀಕರಿಸಿದ್ದರು. ಆದರೆ ಇದನ್ನು ಗಮನಿಸಿದ್ದ ಯುವಕರು ತಮ್ಮಪಾಡಿಗೆ ಇದ್ದರು. ಮತ್ತೆ ಯುವಕರು ಬೈಕ್ ನಲ್ಲಿ ವಾಪಸ್ ಹೋದ್ರೆ ಯುವತಿಯರು ಬಸ್ ನಲ್ಲಿ ಹೋಗಿದ್ದರು ಎನ್ನಲಾಗಿದೆ.

ವಿದ್ಯಾರ್ಥಿನಿಯರ ಪೈಕಿ ಕ್ರಿಶ್ಚಿಯನ್ ಸಮುದಾಯದ ಯುವತಿ ನಗರದ ಚಿಲಿಂಬಿಯಲ್ಲಿ ಬಸ್ ನಿಂದ ಇಳಿದು ತನ್ನ ಪಿಜಿ ಕಡೆ ತೆರಳುತ್ತಿದ್ದ ವೇಳೆ ಪಣಂಬೂರು ಬೀಚ್ ನಲ್ಲಿ ಹಿಂಬಾಲಿಸುತ್ತಿದ್ದ ಅದೇ ಅಪರಿಚಿತರು ಹಿಂಬಾಲಿಸಿಕೊಂಡು ಬಂದು ಯುವತಿಯ ಮೈಮೇಲೆ ಕೈಹಾಕಿ ಬೆದರಿಸಿದ್ದು, ಕೇರಳ ಸ್ಟೋರಿ ನೋಡಿಯೂ ನಿಮಗೆ ಬುದ್ಧಿ ಬರುವುದಿಲ್ವಾ ಎಂದು ಅವಾಚ್ಯ ಶಬ್ದಗಗಳಿಂದ ಬೈದು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾಗಿ ತಿಳಿದು ಬಂದಿದೆ. ಈ ಸಂಬಂಧ ಸಂತ್ರಸ್ತ ವಿದ್ಯಾರ್ಥಿನಿಯರು ಉರ್ವಸ್ಟೋರ್ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ