ವರುಣನ ಆರ್ಭಟಕ್ಕೆ ‘ಮಹಾ’ ತತ್ತರ: ಪ್ರವಾಹದಲ್ಲಿ ಸಿಲುಕಿಕೊಂಡಿದ್ದ ಸುಮಾರು 110 ಮಂದಿಯ ರಕ್ಷಣೆ
ಮಳೆಯ ಆರ್ಭಟಕ್ಕೆ ಪೂರ್ವ ಮಹಾರಾಷ್ಟ್ರ ತತ್ತರಿಸಿ ಹೋಗಿದೆ. ಯವತ್ಮಾಲ್ ಜಿಲ್ಲೆಯ ಮಹಾಗಾಂವ್ ತಹಸಿಲ್‌ನಲ್ಲಿ ಪ್ರವಾಹದಲ್ಲಿ ಸಿಲುಕಿಕೊಂಡಿದ್ದ ಸುಮಾರು 110 ಮಂದಿಯನ್ನು ಶನಿವಾರ ರಕ್ಷಿಸಲಾಗಿದೆ.
ರಾಜ್ಯ ವಿಪತ್ತು ನಿರ್ವಹಣಾ ಪಡೆ(ಎಸ್‌ಡಿಆರ್‌ಎಫ್) ಜೊತೆಗೆ ಭಾರತೀಯ ವಾಯುಪಡೆಯ ಎಂಐ-17 ವಿ5 ಹೆಲಿಕಾಪ್ಟರ್ ಅನ್ನು ಆನಂದನಗರ ತಾಂಡಾ ಗ್ರಾಮದಲ್ಲಿ ರಕ್ಷಣಾ ಕಾರ್ಯಾಚರಣೆಗಾಗಿ ಬಳಸಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಅಮೋಲ್ ಯೆಡ್ಗೆ ಅವರು ಪಿಟಿಐಗೆ ತಿಳಿಸಿದ್ದಾರೆ.
ಎಸ್‌ಡಿಆರ್‌ಎಫ್ ಸಿಬ್ಬಂದಿ ಪ್ರವಾಹದಲ್ಲಿ ಸಿಲುಕಿದ್ದ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿದೆ. ನಾಗ್ಪುರದಿಂದ 150 ಕಿ.ಮೀ ದೂರದಲ್ಲಿರುವ ಯವತ್ಮಾಲ್ ಜಿಲ್ಲೆಯಲ್ಲಿ ಶುಕ್ರವಾರದಿಂದ ಭಾರೀ ಮಳೆ ಸುರಿಯುತ್ತಿದೆ. ಇದಕ್ಕೂ ಮುನ್ನ ಎರಡು ಐಎಎಫ್ ಹೆಲಿಕಾಪ್ಟರ್‌ಗಳು ನಾಗ್ಪುರದಿಂದ ರಕ್ಷಣಾ ಕಾರ್ಯಾಚರಣೆಗಾಗಿ ಯವತ್ಮಾಲ್ ಜಿಲ್ಲೆ ತೆರಳಿವೆ ಎಂದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಟ್ವೀಟ್ ಮಾಡಿದ್ದರು. ಆದರೆ ಕೇವಲ ಒಂದು ಹೆಲಿಕಾಪ್ಟರ್ ಅನ್ನು ಮಾತ್ರ ಕಳುಹಿಸಲಾಗಿದೆ ಎಂದು ರಕ್ಷಣಾ ವಕ್ತಾರರು ಹೇಳಿದ್ದರು.
ಮಹಾಗಾಂವ್ ತಹಸಿಲ್‌ನಲ್ಲಿ ಶುಕ್ರವಾರ ಮಧ್ಯರಾತ್ರಿಯಿಂದ ಶನಿವಾರ ಬೆಳಗಿನ ಜಾವದವರೆಗೆ 231 ಮಿ.ಮೀ. ಮಳೆ ದಾಖಲಾಗಿದ್ದರೆ, ಜಿಲ್ಲೆಯಲ್ಲಿ 117.5 ಮಿಮೀ ಮಳೆ ದಾಖಲಾಗಿದೆ.
ಇನ್ನೊಂದು ಪೂರ್ವ ಮಹಾರಾಷ್ಟ್ರ ಜಿಲ್ಲೆಯ ಬುಲ್ಧಾನಾದ ಸಂಗ್ರಾಮ್‌ಪುರ ತೆಹಸಿಲ್‌ನ ಕಾಸರ್‌ಗಾಂವ್ ಗ್ರಾಮದಲ್ಲಿ ಸುಮಾರು 140 ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/BnbLYSQaXK1Hate4P0Bt3B
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw



























