ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ: ನೆಲಕ್ಕುರುಳಿದ 10 ವಿದ್ಯುತ್ ಕಂಬಗಳು! - Mahanayaka

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ: ನೆಲಕ್ಕುರುಳಿದ 10 ವಿದ್ಯುತ್ ಕಂಬಗಳು!

bantwal
24/07/2023


Provided by

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರ ಭಾರೀ ಮಳೆಯಾಗುತ್ತಿದ್ದ ಹಿನ್ನೆಲೆಯಲ್ಲಿ ಬಂಟ್ವಾಳದ ಅಡ್ಡೂರಿನಲ್ಲಿ ಸುಮಾರು 10 ವಿದ್ಯುತ್ ಕಂಬಗಳು ನೆಲಕ್ಕುರುಳಿ ಬಿದ್ದಿದೆ.

ನಿರಂತರ ಮಳೆಯಿಂದ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಬಂಟ್ವಾಳದ ಅಡ್ಡೂರು, ಪೊಳಲಿ ಪರಿಸರದಲ್ಲೂ ಭಾರೀ ಮಳೆಗೆ ಅಪಾರ ಹಾನಿ ಆಗಿರುವ ಬಗ್ಗೆ ವರದಿಯಾಗಿದೆ.ಅಡ್ಡೂರಿನಲ್ಲಿ ಸುಮಾರು 10 ವಿದ್ಯುತ್ ಕಂಬಗಳು ಧರೆಗೆ ಉರುಲಿದ್ದು, ಎರಡು ದಿನಗಳ ಕಾಲ ವಿದ್ಯುತ್ ಮೊಟಕುಗೊಂಡಿತು.

ಬಳಿಕ ಮೆಸ್ಕಾಂ ಇಲಾಖೆ ಸಿಬ್ಬಂದಿ ಬಂದು ವಿದ್ಯುತ್ ಕಂಬಗಳನ್ನು ಸರಿಪಡಿಸಿದ್ದಾರೆ. ಕೆಸರು ನೀರಿನಲ್ಲಿ ವಿದ್ಯುತ್ ಕಂಬಗಳನ್ನು ತೆರವುಗೊಳಿಸಲು ಸಿಬ್ಬಂದಿ ಹಾಗೂ ಊರಿನ ನಾಗರಿಕರ ಹರಸಾಹಸ ಪಟ್ಟರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

 

 

ಇತ್ತೀಚಿನ ಸುದ್ದಿ