ಕುಡಿತದ ಮತ್ತಿನಲ್ಲಿದ್ದ ವ್ಯಕ್ತಿಗೆ ಶೂನಿಂದ ಅಮಾನವೀಯವಾಗಿ ಥಳಿಸಿದ ಪೊಲೀಸ್ ಪೇದೆ! - Mahanayaka
2:59 PM Wednesday 28 - January 2026

ಕುಡಿತದ ಮತ್ತಿನಲ್ಲಿದ್ದ ವ್ಯಕ್ತಿಗೆ ಶೂನಿಂದ ಅಮಾನವೀಯವಾಗಿ ಥಳಿಸಿದ ಪೊಲೀಸ್ ಪೇದೆ!

denesh atri
24/07/2023

ಕುಡಿದ ಮತ್ತಿನಲ್ಲಿದ್ದ ವ್ಯಕ್ತಿಗೆ ಪೊಲೀಸ್ ಪೇದೆಯೋರ್ವ ಶೂನಿಂದ ಥಳಿಸಿದ ಘಟನೆ ಉತ್ತರ ಪ್ರದೇಶದ ಹರ್ದೋಯಿ ಜಿಲ್ಲೆಯಲ್ಲಿ ನಡೆದಿದೆ.

ಪೊಲೀಸ್ ಪೇದೆ ವ್ಯಕ್ತಿಗೆ ಶೂನಿಂದ ಕ್ರೂರವಾಗಿ ಥಳಿಸಿದ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಆರೋಪಿ ಪೊಲೀಸ್ ಪೇದೆಯನ್ನು ಅಮಾನತು ಮಾಡಲಾಗಿದೆ.

ಘಟನೆಯ ವಿವರ: ದಿನೇಶ್ ಅತ್ರಿ ಎಂಬವರು ಕುಡಿದ ಮತ್ತಿನಲ್ಲಿ ಮಹಿಳೆಯರು ಹಾಗೂ ಮಕ್ಕಳ ಜೊತೆ ಅನುಚಿತವಾಗಿ ವರ್ತಿಸುತ್ತಿದ್ದ ಎನ್ನಲಾಗಿದೆ. ಜೊತೆಗೆ ಸ್ಥಳೀಯ ಅಂಗಡಿಗಳಿಗೆ ಹೋಗಿ ಉಚಿತವಾಗಿ ತಂಪು ಪಾನೀಯ ಕೊಡುವಂತೆ ಜಗಳ ಆರಂಭಿಸಿದ್ದ ಎಂದು ಹೇಳಲಾಗಿದೆ.

ಇನ್ನೂ ಪೊಲೀಸ್ ಪೇದೆ ಹೇಳುವಂತೆ, ದಿನೇಶ್ ಅತ್ರಿ ಇತರರೊಂದಿಗೆ ಅನುಚಿತವಾಗಿ ವರ್ತಿಸುತ್ತಿದ್ದ. ಆತನನ್ನು ತಡೆಯಲು ಮುಂದಾದಾಗ ಜಗಳ ಆರಂಭವಾಗಿದೆ. ನಂತರ ಆತ ಪೊಲೀಸರ ಜೊತೆಗೂ ಅನುಚಿತವಾಗಿ ವರ್ತಿಸಿದ್ದ. ಈ ವೇಳೆ ಆತನಿಗೆ ಶೂನಿಂದ ಥಳಿಸಿರುವುದಾಗಿ ತಿಳಿಸಿದ್ದಾರೆ.

 

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ