ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆ ಹಿನ್ನೆಲೆ ಜುಲೈ 26ರಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ: ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯ ರೆಡ್ ಅಲರ್ಟ್ ಮುನ್ಸೂಚನೆಯಂತೆ ಹೆಚ್ಚು ಮಳೆಯಾಗುತ್ತಿರುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದಿನಾಂಕ:26.07.2023 ರಂದು ಉಡುಪಿ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ, ಹಾಗೂ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶಿಸಿದ್ದಾರೆ.
ಉಡುಪಿ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗಿದ್ದು, ನದಿಗಳು , ಹಳ್ಳಗಳು ,ತೋಡುಗಳು ತುಂಬಿ ಹರಿಯುತ್ತಿರುವ ಕಾರಣ, ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ ಸಾರ್ವಜನಿಕರು ಮತ್ತು ಜಿಲ್ಲೆಗೆ ಆಗಮಿಸುವ ಪ್ರವಾಸಿಗರು , ಬೀಚ್ ಗಳು, ನದಿಗಳು ಹಾಗು ಜಲಪಾತಗಳ ಬಳಿ ತೆರಳದಂತೆ ಹಾಗೂ ಫೋಟೋ ಮತ್ತು ವಿಡಿಯೋ ಚಿತ್ರೀಕರಣ ಮಾಡುವುದನ್ನು ಕಟ್ಟು ನಿಟ್ಟಾಗಿ ನಿಷೇಧಿಸಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 7483551849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw