ಶೌಚಾಲಯದಲ್ಲಿ ವಿದ್ಯಾರ್ಥಿನಿಯ ವಿಡೀಯೋ ಚಿತ್ರೀಕರಣ: ಎರಡು ಪ್ರತ್ಯೇಕ ಪ್ರಕರಣಗಳ ತನಿಖೆ: ಹಾಕೆ ಮಚ್ಚೇಂದ್ರ - Mahanayaka

ಶೌಚಾಲಯದಲ್ಲಿ ವಿದ್ಯಾರ್ಥಿನಿಯ ವಿಡೀಯೋ ಚಿತ್ರೀಕರಣ: ಎರಡು ಪ್ರತ್ಯೇಕ ಪ್ರಕರಣಗಳ ತನಿಖೆ: ಹಾಕೆ ಮಚ್ಚೇಂದ್ರ

hake akshay macchindra
26/07/2023


Provided by

ಉಡುಪಿಯ ನೇತ್ರ ಜ್ಯೋತಿ ಪ್ಯಾರಾಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿನಿಯ ವಿಡೀಯೋ ಚಿತ್ರೀಕರಣಕ್ಕೆ ಸಂಬಂಧಿಸಿದಂತೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿ ತನಿಖೆಯಲ್ಲಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧ್ಯಕ್ಷ ಕಕ್ಷೆ ಹಾಕೆ ಮಚ್ಚೇಂದ್ರ ತಿಳಿಸಿದ್ದಾರೆ.

ಶೌಚಾಲಯದಲ್ಲಿ ವಿದ್ಯಾರ್ಥಿನಿಯ ವಿಡಿಯೋ ಮಾಡಿ ಡಿಲೀಟ್ ಆದ ಬಗ್ಗೆ ಮೂವರು ವಿದ್ಯಾರ್ಥಿನಿಯರು ಮತ್ತು ಕಾಲೇಜು ಆಡಳಿತ ಮಂಡಳಿಯವರ ವಿರುದ್ಧ ಮಹಿಳೆಯ ಮಾನಕ್ಕೆ ಕುಂದುಂಟು ಮಾಡುವ ಕೃತ್ಯ,  ವ್ಯಕ್ತಿಯ ಖಾಸಗಿ ಚಿತ್ರವನ್ನು ಚಿತ್ರೀಕರಿಸುವ ಕೃತ್ಯ, ಮಾಹಿತಿಯನ್ನು ಮತ್ತು ದಸ್ತಾವೇಜನ್ನು ಹಾಜರುಪಡಿಸಲು ತಪ್ಪುವ ಕೃತ್ಯದ ಅಡಿಯಲ್ಲಿ ಮಲ್ಪೆ ಠಾಣಾ ಪಿಎಸ್‌ ಐರವರು ಸ್ವಯಂ ಪ್ರೇರಿತವಾಗಿ ಮಲ್ಪೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ನೇತ್ರ ಜ್ಯೋತಿ ಕಾಲೇಜಿನ ಶೌಚಾಲಯದಲ್ಲಿ ಹಿಡನ್ ಕ್ಯಾಮೆರಾ ಮೂಲಕ ವಿಡಿಯೋ ಚಿತ್ರೀಕರಿಸಿ ಪಾರ್ವಡ್ ಮಾಡಿದ್ದಾರೆ ಎಂದು ಎಡಿಟ್ ಮಾಡಿದ ವಿಡಿಯೋ One India Kannada ಯೂ–ಟ್ಯೂಬ್ ಚಾನಲ್‌ ನಲ್ಲಿ ಅಪ್ಲೋಡ್ ಆಗಿದ್ದು ಅದನ್ನು ಕಾಲು ಸಿಂಗ್‌ ಚೌಹಾಣ್ ಎಂಬ ವ್ಯಕ್ತಿ ತನ್ನ ಟ್ವಿಟರ್ ಖಾತೆಯಲ್ಲಿ ಪೋಸ್ಟ್ ಮಾಡಿ ಆಕ್ಷೇಪಾರ್ಹ ಸುಳ್ಳುಸುದ್ದಿ ಹಬ್ಬಿಸುತ್ತಿರುವುದು ಕಂಡು ಬಂದಿದೆ.

ಆದುರಿಂದ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಿ ಕೋಮು ದ್ವೇಷ ಉಂಟು ಮಾಡಿ ಸೌಹಾರ್ಧತೆಗೆ ಭಾದಕವಾಗುವ ಕೃತ್ಯದ ಅಡಿಯಲ್ಲಿ ಮಲ್ಪೆ ಪೊಲೀಸ್ ಠಾಣೆಯಲ್ಲಿ ದೂರು ಸ್ವಯಂಪ್ರೇರಿತ ದೂರು ದಾಖಲಾಗಿದ್ದು, ತನಿಖೆ ಕೈಗೊಳ್ಳಲಾಗಿದೆ ಎಂದು ಎಸ್ ಪಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿhttps://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿhttps://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿhttps://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ