ಬಾಲಕಿಗೆ ಲೈಂಗಿಕ ದೌರ್ಜನ್ಯ ನೀಡಿ ಗರ್ಭ ಧರಿಸಲು ಕಾರಣನಾದ ಆರೋಪಿ ಅರೆಸ್ಟ್

ಬಾಲಕಿಗೆ ಲೈಂಗಿಕ ದೌರ್ಜನ್ಯ ನೀಡಿ ಆಕೆ ಗರ್ಭ ಧರಿಸಲು ಕಾರಣನಾದ ಆರೋಪಿಯನ್ನು ಮಂಗಳೂರಲ್ಲಿ ಬಂಧಿಸಲಾಗಿದೆ. ಶಾಫಿ ಎಂಬಾತನನ್ನು ಮಂಗಳೂರಿನ ಮಹಿಳಾ ಪೊಲೀಸರು ಮತ್ತು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
8ನೇ ತರಗತಿಯಲ್ಲಿ ಕಲಿಯುತ್ತಿರುವ 12 ವರ್ಷ 10 ತಿಂಗಳು ಪ್ರಾಯದ ಬಾಲಕಿಯ ಮೇಲೆ ಆರೋಪಿಯು ಹಲವು ಬಾರಿ ಲೈಂಗಿಕ ದೌರ್ಜನ್ಯ ಎಸಗಿದ್ದ ಎಂದು ಆರೋಪಿಸಿ ಮಹಿಳಾ ಠಾಣೆಗೆ ದೂರು ನೀಡಲಾಗಿತ್ತು. ಬಾಲಕಿ 6 ತಿಂಗಳ ಗರ್ಭಿಣಿಯಾಗಿದ್ದು, ಆಕೆ ನೀಡಿದ ದೂರಿನಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.
ಶನಿವಾರ ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಮಂಗಳೂರು ಮಹಿಳಾ ಠಾಣೆಯ ನಿರೀಕ್ಷಕ ಲೋಕೇಶ್ ಎ.ಸಿ. ತನಿಖೆ ನಡೆಸುತ್ತಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 7483551849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw