ದಲಿತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ: ಸಂಘ ಪರಿವಾರದ ಕಾರ್ಯಕರ್ತರೆನ್ನಲಾದ ಮೂವರು ಅರೆಸ್ಟ್

ದಲಿತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಮೂಡುಬಿದರೆ ಮೂಲದ ಪ್ರಸ್ತುತ ಬೆರಿಪದವಿ ನಿವಾಸಿ ಅಕ್ಷಯ್ ದೇವಾಡಿಗ (24), ಬಾಯಾರು ಗ್ರಾಮದ ಕೊಜಪ್ಪ ನಿವಾಸಿ ಕಮಲಾಕ್ಷ ಬೆಳ್ಚಾಡ (30), ಬೆರಿಪದವು ನಿವಾಸಿ ಸುಕುಮಾರ ಬೆಳ್ಚಾಡ (28) ಎಂದು ಗುರುತಿಸಲಾಗಿದೆ. ಅಕ್ಷಯ್ ಬೆರಿಪದವಿನಲ್ಲಿ ಅಣ್ಣನ ಮನೆಯಲ್ಲಿದ್ದುಕೊಂಡು ಪೈಟಿಂಗ್ ಕೆಲಸ ನಿರ್ವಹಿಸುತ್ತಿದ್ದ. ಕಮಲಾಕ್ಷ ಗಾರೆ ಕೆಲಸ ಹಾಗೂ ಸುಕುಮಾರ ಚಾಲಕ ವೃತ್ತಿಯನ್ನು ಮಾಡುತ್ತಿದ್ದ. ಬಂಧಿತರು ಸಂಘಪರಿವಾರದ ಕಾರ್ಯಕರ್ತರು ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕುರಿತು ವಿಟ್ಲ ಠಾಣೆಯಲ್ಲಿ ಪೊಕ್ಸೋ ಹಾಗೂ ದಲಿತ ದೌರ್ಜನ್ಯ ಪ್ರಕರಣ ದಾಖಲಾಗಿದೆ. ಬಾಲಕಿ ನೀಡಿದ ಮಾಹಿತಿಯಂತೆ ಪ್ರಕರಣ ದಾಖಲಾಗಿದೆ.
ಪರಿಶಿಷ್ಟ ಪಂಗಡಕ್ಕೆ ಸೇರಿದ ಬಾಲಕಿಯನ್ನು 2019 ರಲ್ಲಿ ಆಕೆಯ ಸಂಬಂಧಿಕರ ಮನೆಯಲ್ಲಿ ಜಯಪ್ರಕಾಶ್ ಎಂಬಾತ ಲೈಂಗಿಕ ದೌರ್ಜನ್ಯ ನಡೆಸಿದ್ದ. ಕಳೆದ ಜನವರಿಯಲ್ಲಿ ಅಚ್ಚು ಯಾನೆ ಅಕ್ಷಯ್ ಎಂಬಾತ ಬೆರಿಪದವು ಶಾಲೆಯ ಬಳಿಗೆ ಬಂದು ಬೇರೆ ಬೇರೆ ದಿನಗಳಲ್ಲಿ 3 ಬಾರಿ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ. ಕಳೆದ ಮೇ ತಿಂಗಳಿನಲ್ಲಿ ಬೆರಿಪದವು ರಾಜ ಎಂಬಾತ ಬಾಲಕಿಗೆ ಕರೆ ಮಾಡಿ ಮಾತನಾಡುತ್ತಿದ್ದ. ಬೆರಿಪದವು ವಿದ್ಯಾರಣ್ಯ ಶಾಲೆಯ ಗುಡ್ಡ ಜಾಗಕ್ಕೆ ಬರಲು ಹೇಳಿ, ಬಾಲಕಿಯನ್ನು ಮದುವೆಯಾಗುತ್ತೇನೆಂದು ಪುಸಲಾಯಿಸಿ ಆಕೆಯ ಇಚ್ಛೆಗೆ ವಿರುದ್ಧವಾಗಿ ಲೈಂಗಿಕ ದೌರ್ಜನ್ಯ ನಡೆಸಿರುತ್ತಾನೆ. ಕಳೆದ ಜೂನ್ ತಿಂಗಳಿನ ಮೊದಲ ವಾರದಲ್ಲಿ ಅಚ್ಚು ಯಾನೆ ಅಕ್ಷಯ್ ಎಂಬಾತನ ಮುಖಾಂತರ ಸುಕುಮಾರ ಪರಿಚಯಿಸಿಕೊಂಡು ಮದುವೆಯಾಗುತ್ತೇನೆಂದು ಬೆರಿಪದವು ಎಂಬಲ್ಲಿಗೆ ಬರಲು ಹೇಳಿ ಅಲ್ಲಿನ ವಿದ್ಯಾರಣ್ಯ ಶಾಲೆಯ ಗುಡ್ಡ ಜಾಗದಲ್ಲಿ ಬಾಲಕಿಯ ಇಚ್ಛೆಗೆ ವಿರುದ್ಧವಾಗಿ ಲೈಂಗಿಕ ದೌರ್ಜನ್ಯ ನಡೆಸಿರುತ್ತಾನೆ. ಅಲ್ಲದೇ 28.07.2023 ರಂದು ರಾತ್ರಿ ವೇಳೆ ಕಮಾಲಾಕ್ಷ ಬೆಳ್ಚಡನು ಮದುವೆಯಾಗುತ್ತೇನೆಂದು ಭರವಸೆ ನೀಡಿದ್ದ. ಅಲ್ಲದೇ ಆತನ ಮನೆಯಾದ ಬಾಯಾರು ಗ್ರಾಮದಲ್ಲಿರುವ ಅವರ ಸಂಬಂಧಿಯವರ ಖಾಲಿ ಮನೆಗೆ ಬರಲು ಹೇಳಿ ಬಾಲಕಿಯು ಹೋದಾಗ ಬಾಲಕಿಯ ಇಚ್ಛೆಗೆ ವಿರುದ್ಧವಾಗಿ ಲೈಂಗಿಕ ದೌರ್ಜನ್ಯ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.
ಈ ಎಲ್ಲಾ ಘಟನೆಗಳನ್ನು ಬಾಲಕಿ ಪೊಲೀಸರ ಮುಂದೆ ಹೇಳಿಕೆ ನೀಡಿದ್ದು, ಅದರಂತೆ ಪೋಸ್ಕೋ, ಅತ್ಯಾಚಾರ ಪ್ರಕರಣ ದಾಖಲಾಗಿದೆ. ತಲೆಮರೆಸಿಕೊಂಡಿರುವ ಇನ್ನಿಬ್ಬರು ಆರೋಪಿಗಳಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw