ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಕೊಂದು ಸಾವಿಗೆ ಶರಣಾದ ಪತಿ! - Mahanayaka

ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಕೊಂದು ಸಾವಿಗೆ ಶರಣಾದ ಪತಿ!

death
03/08/2023


Provided by

ಪತ್ನಿ ಹಾಗೂ ಇಬ್ಬರು ಮಕ್ಕಳನ್ನ ಕೊಂದು ಪತಿ ಸಾವಿಗೆ ಶರಣಾಗಿರುವ ಘಟನೆ ಕಾಡುಗೋಡಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಮೃತರನ್ನು ಪತಿ ವೀರಾರ್ಜುನ ವಿಜಯ್ (31), ಪತ್ನಿ ಹೇಮಾವತಿ(29) ಹಾಗೂ ಒಂದು ವರ್ಷ ಹಾಗೂ ಮೂರು ವರ್ಷ ಇಬ್ಬರು ಹೆಣ್ಣು ಮಕ್ಕಳು ಎಂದು ಗುರುತಿಸಲಾಗಿದೆ.

ಸಾವಿಗೆ ಶರಣಾಗುವ ಮುನ್ನ ಪತಿ ವೀರಾರ್ಜುನ ವಿಜಯ್ ಪತ್ನಿ ಹಾಗೂ ಮಕ್ಕಳನ್ನ ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡಿರೋ ಶಂಕೆ ವ್ಯಕ್ತವಾಗಿದೆ.ಇವರು ಮೂಲತಃ ಆಂಧ್ರ ಮೂಲದವರಾಗಿದ್ದು, ಬೆಂಗಳೂರಿನ ಶೀಗೆಹಳ್ಳಿಯ ಸಾಯಿ ಗಾರ್ಡನ್ ಅಪಾರ್ಟ್ ಮೆಂಟ್ ನಲ್ಲಿ ವಾಸಿಸುತ್ತಿದ್ದರು.

ನೆರೆಹೊರೆಯವರ ಮಾಹಿತಿಯನ್ವಯ ಕೂಡಲೇ ಸ್ಥಳಕ್ಕೆ ಭೇಟಿಕೊಟ್ಟ ಕಾಡುಗೋಡಿ ಪೊಲೀಸರು ಬಾಗಿಲು ಒಡೆದು ಒಳಪ್ರವೇಶಿಸಿ ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ನಾಲ್ವರ ಮೃತದೇಹಗಳು ಪತ್ತೆಯಾಗಿವೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ