ಮೀನು ಹಿಡಿಯಲು ಹೋಗಿದ್ದ ಇಬ್ಬರು ಬಾಲಕರ ದಾರುಣ ಸಾವು - Mahanayaka
12:38 AM Friday 27 - February 2026

ಮೀನು ಹಿಡಿಯಲು ಹೋಗಿದ್ದ ಇಬ್ಬರು ಬಾಲಕರ ದಾರುಣ ಸಾವು

chikkamagaluru
06/08/2023

ಚಿಕ್ಕಮಗಳೂರು: ಮೀನು ಹಿಡಿಯಲು ಹೋಗಿದ್ದ ಮೂವರು ಬಾಲಕರ ಪೈಕಿ ಇಬ್ಬರು ಸಾವನ್ನಪ್ಪಿ ಓರ್ವ ಪಾರಾದ ಘಟನೆ ಮೂಡಿಗೆರೆ ಪಟ್ಟಣದ ಹೊರವಲಯದ ಹ್ಯಾಂಡ್ ಪೋಸ್ಟ್ ಬಳಿ ನಡೆದಿದೆ.

ತನ್ಮಯಿ, ಕಿಶೋರ್ (12) ಮೃತ ಬಾಲಕರಾಗಿದ್ದಾರೆ. ಮೀನು ಹಿಡಿಯಲು ಹೋಗಿದ್ದ ಸಂದರ್ಭದಲ್ಲಿ ಈ ಮೂವರು ಕೂಡ ನೀರಿನಲ್ಲಿ ಸಿಲುಕಿದ್ದಾರೆ. ಈ ವೇಳೆ ಇಬ್ಬರು ಬಾಲಕರು ನೀರುಪಾಲಾದರೆ, ಓರ್ವ ಹರಸಾಹಸಪಟ್ಟು ನೀರಿನಿಂದ ಮೇಲೆ ಬಂದಿದ್ದಾನೆ.

ಘಟನೆಯ ಮಾಹಿತಿ ದೊರೆತ ತಕ್ಷಣ ಸ್ಥಳೀಯ ಈಜು ತಜ್ಞರು ಪೊಲೀಸರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಇಬ್ಬರ ಮೃತದೇಹಗಳನ್ನು ಕೆರೆಯಿಂದ ಮೇಲೆತ್ತಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ