ಉಡುಪಿ: ಸಂತೆ ಮಾರುಕಟ್ಟೆಯಲ್ಲಿ ನಿಷೇಧಿತ ಪ್ಲಾಸ್ಟಿಕ್ ವಶ: ದಂಡ ವಸೂಲಿ - Mahanayaka
12:48 AM Saturday 23 - August 2025

ಉಡುಪಿ: ಸಂತೆ ಮಾರುಕಟ್ಟೆಯಲ್ಲಿ ನಿಷೇಧಿತ ಪ್ಲಾಸ್ಟಿಕ್ ವಶ: ದಂಡ ವಸೂಲಿ

udupi news
09/08/2023


Provided by

ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಆದಿಉಡುಪಿ ಸಂತೆ ಮಾರುಕಟ್ಟೆಯಲ್ಲಿ ನಿಷೇದಿತ ಪ್ಲಾಸ್ಟಿಕ್‌ಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಇಂದು ದಾಳಿ ನಡೆಸಿ 62 ಕೆ.ಜಿ ನಿಷೇಧಿತ ಪ್ಲಾಸ್ಟಿಕ್‌ಗಳನ್ನು ವಶಪಡಿಸಿಕೊಂಡು ಸಂತೆ ಅಂಗಡಿಯವರಿಗೆ ರೂ. 700  ದಂಡ ವಿಧಿಸಲಾಯಿತು ಹಾಗೂ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ಬದಲಿಗೆ ಮರುಬಳಕೆಯ ವಸ್ತುಗಳನ್ನು ಬಳಸುವಂತೆ ಹಾಗೂ ನಿಷೇಧಿತ ಪ್ಲಾಸ್ಟಿಕ್‌ಗಳನ್ನು ಬಳಸಿದ್ದಲ್ಲಿ ಬಾರಿ ದಂಡವನ್ನು ವಿಧಿಸಿ ಉದ್ದಿಮೆ ಪರವಾನಿಗೆಯನ್ನು ರದ್ದು ಪಡಿಸಲಾಗುವುದು ಎಂದು ತಿಳಿಸಲಾಯಿತು.

ನಗರಸಭೆಯ ಪೌರಾಯುಕ್ತರು, ಹಿರಿಯ ಆರೋಗ್ಯ ನಿರೀಕ್ಷಕರು, ಕಿರಿಯ ಆರೋಗ್ಯ ನಿರೀಕ್ಷಕರು, ಸ್ಯಾನೀಟರಿ ಸೂಪರ್‌ವೈಸರ್ ಹಾಗೂ ಪೌರಕಾರ್ಮಿಕರು ದಾಳಿಯಲ್ಲಿ ಭಾಗವಹಿಸಿದ್ದರು.

ಜುಲೈ ಮಾಹೆಯಲ್ಲಿ ಒಟ್ಟು 324 ಕೆ.ಜಿ ನಿಷೇಧಿತ ಪ್ಲಾಸ್ಟಿಕ್‌ಗಳನ್ನು ವಶಪಡಿಸಿಕೊಂಡು ರೂ. 58,200 ನ್ನು ದಂಡ ವಿಧಿಸಲಾಗಿದ್ದು, ಉದ್ದಿಮೆಗಳಲ್ಲಿ ಏಕ ಬಳಕೆಯ ಪ್ಲಾಸ್ಟಿಕ್‌ಗಳನ್ನು ಉಪಯೋಗಿಸದ ಉದ್ದಿಮೆಯನ್ನು ಹಸಿರು ಸಂಸ್ಥೆ ಎಂದು ಘೋಷಿಸಲಾಯಿತು. ಎಲ್ಲಾ ಉದ್ದಿಮೆದಾರರು ಏಕ ಬಳಕೆಯ ಪ್ಲಾಸ್ಟಿಕ್‌ಗಳನ್ನು ಉಪಯೋಗಿಸುವುದನ್ನು ತ್ಯಜಿಸಿ ಹಸಿರು ಸಂಸ್ಥೆ ಎಂದು ಘೋಷಿಸಿಕೊಳ್ಳುವಂತೆ ಪೌರಾಯುಕ್ತರು ಸೂಚಿಸಿರುತ್ತಾರೆ.

ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು ಮನೆ, ಮದುವೆ ಹಾಲ್, ಹೊಟೇಲ್‌ಗಳಲ್ಲಿ ಸಮಾರಂಭ ಮಾಡುವಾಗ ಹಾಗೂ ರಸ್ತೆ ಬದಿ ಟೀ, ಕಾಪಿ, ತಿಂಡಿ ಮಾರಾಟ ಮಾಡುವವರು ರಾಜ್ಯ ಸರ್ಕಾರದ ನಿರ್ದೇಶನದಂತೆ ರೆಡ್ಯೂಸ್, ರೀಯೂಸ್, ರೀಸೈಕಲ್ ಮಾದರಿಯಲ್ಲಿ ತ್ಯಾಜ್ಯ ವಸ್ತುಗಳನ್ನು ಕಡಿಮೆ ಮಾಡುವ ಹಿತ ದೃಷ್ಟಿಯಿಂದ ಪ್ರತಿಯೊಬ್ಬ ನಾಗರಿಕರು ಸಭೆ ಸಮಾರಂಭಗಳಲ್ಲಿ ಟೀ, ಕಾಫಿ, ತಿಂಡಿ, ಊಟಕ್ಕೆ ಬಳಸುವಾಗ ಮರುಬಳಕೆಯ ವಸ್ತುಗಳಾದ ಸ್ಟೀಲ್ ಲೋಟ, ಸ್ಟೀಲ್ ತಟ್ಟೆಗಳನ್ನು ಕಡ್ಡಾಯವಾಗಿ ಬಳಸಿ ತ್ಯಾಜ್ಯವನ್ನು ಕಡಿಮೆ ಮಾಡಿ ಉಡುಪಿ ನಗರವನ್ನು ಕಸ ಮುಕ್ತ ನಗರವನ್ನಾಗಿ ಮಾಡುವುದು. ಸಾರ್ವಜನಿಕರ ಆರೋಗ್ಯ ಕಾಪಾಡುವ ಹಿತದೃಷ್ಟಿಯಿಂದ ಹಾಗೂ ಪರಿಸರ ಸಂರಕ್ಷಣೆ ಮಾಡಲು ಸಾರ್ವಜನಿಕರು ನಗರಸಭೆಯೊಂದಿಗೆ ಕೈಜೋಡಿಸುವಂತೆ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 7483551849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ