ಕೆಂಪು ಕೋಟೆಯಲ್ಲಿ ಮಣಿಪುರ ಹಿಂಸಾಚಾರ ಬಗ್ಗೆ ಪ್ರಧಾನಿ ಮೋದಿ ಹೇಳಿದಿಷ್ಟು…! - Mahanayaka

ಕೆಂಪು ಕೋಟೆಯಲ್ಲಿ ಮಣಿಪುರ ಹಿಂಸಾಚಾರ ಬಗ್ಗೆ ಪ್ರಧಾನಿ ಮೋದಿ ಹೇಳಿದಿಷ್ಟು…!

pm modi
15/08/2023


Provided by

ರಾಷ್ಟ್ರವು ಮಣಿಪುರದೊಂದಿಗೆ ಇದೆ ಎಂದು ಪ್ರಧಾನಮಂತ್ರಿಯವರು ಕೆಂಪು ಕೋಟೆಯಿಂದ ತಮ್ಮ ಸತತ 10ನೇ ಸ್ವಾತಂತ್ರ್ಯೋತ್ವವದ ಭಾಷಣದ ಆರಂಭದಲ್ಲಿಯೇ ಹೇಳಿದರು.

ಕಳೆದ ಕೆಲವು ವಾರಗಳಲ್ಲಿ, ಈಶಾನ್ಯ ರಾಜ್ಯದಲ್ಲಿ ನಡೆದ ಹಿಂಸಾಚಾರದ ಅವಧಿಯಲ್ಲಿ, ವಿಶೇಷವಾಗಿ ಮಣಿಪುರದಲ್ಲಿ, ಅನೇಕ ಜನರು ಪ್ರಾಣ ಕಳೆದುಕೊಂಡರು. ನಮ್ಮ ತಾಯಿ ಮತ್ತು ಹೆಣ್ಣುಮಕ್ಕಳ ಗೌರವಕ್ಕೆ ಕುಂದುಂಟಾಯಿತು. ಆದರೆ, ಕಳೆದ ಕೆಲವು ದಿನಗಳಲ್ಲಿ ಅಲ್ಲಿ ಪರಿಸ್ಥಿತಿ ಶಾಂತಗೊಳ್ಳುತ್ತಿದೆ ಎಂದು ತಿಳಿಸಿದರು.

ಕೆಂಪು ಕೋಟೆಯ ಆವರಣದಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಮಣಿಪುರದಲ್ಲಿ ಕಳೆದ ಕೆಲವು ದಿನಗಳಿಂದ ಪರಿಸ್ಥಿತಿ ಶಾಂತವಾಗುತ್ತಿದ್ದು, ಜನರು ಅಲ್ಲಿ ಶಾಂತಿಯನ್ನು ಪುನಃಸ್ಥಾಪಿಸಬೇಕು. ಮಣಿಪುರದಲ್ಲಿನ ಸಮಸ್ಯೆಗಳಿಗೆ ಶಾಂತಿಯ ಮೂಲಕ ಪರಿಹಾರದ ಮಾರ್ಗವನ್ನು ಕಂಡುಕೊಳ್ಳಲಾಗುವುದು ಎಂದಿದ್ದಾರೆ.

ಇತ್ತೀಚಿನ ಸುದ್ದಿ