ಬಾಲಕಿಯ ಅತ್ಯಾಚಾರ ನಡೆಸಿ ಆಕೆಯ ತಾಯಿಗೆ ವಿಡಿಯೋ ಕಳುಹಿಸಿದ ಅಪ್ರಾಪ್ತ ವಯಸ್ಸಿನ ಬಾಲಕರು - Mahanayaka

ಬಾಲಕಿಯ ಅತ್ಯಾಚಾರ ನಡೆಸಿ ಆಕೆಯ ತಾಯಿಗೆ ವಿಡಿಯೋ ಕಳುಹಿಸಿದ ಅಪ್ರಾಪ್ತ ವಯಸ್ಸಿನ ಬಾಲಕರು

01/02/2021

ಚಿಕ್ಕಬಳ್ಳಾಪುರ: ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ನಾಲ್ವರು ಅಪ್ರಾಪ್ತ ವಯಸ್ಸಿನ ಬಾಲಕರು  ಅತ್ಯಾಚಾರ ನಡೆಸಿರುವ ಘಟನೆ ಚಿಕ್ಕಬಳ್ಳಾಪುರ  ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.


Provided by

ಒಂದು ತಿಂಗಳ ಹಿಂದೆ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸಂತ್ರಸ್ತೆ ಹಾಗೂ ಆರೋಪಿಗಳು ಅಪ್ರಾಪ್ತ ವಯಸ್ಸಿನವರಾಗಿದ್ದಾರೆ. ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ್ದ ಆರೋಪಿಗಳು ಕೃತ್ಯವನ್ನು ವಿಡಿಯೋ ಮಾಡಿಕೊಂಡಿದ್ದರು.

ಘಟನೆ ನಡೆದು ಒಂದು ತಿಂಗಳಾಗಿದ್ದರೂ ಈ ಪ್ರಕರಣ ಬೆಳಕಿಗೆ ಬಂದಿರಲಿಲ್ಲ. ಆದರೆ ಅತ್ಯಾಚಾರ ಆರೋಪ ಎದುರಿಸುತ್ತಿದ್ದ ನಾಲ್ವರ ಪೈಕಿ ಓರ್ವ, ಅತ್ಯಾಚಾರ ನಡೆಸಿರುವ ವಿಡಿಯೋವನ್ನು ಸಂತ್ರಸ್ತ ಬಾಲಕಿಯ ತಾಯಿಗೆ ಕಳುಹಿಸಿದಾಗ ಘಟನೆ ಬೆಳಕಿಗೆ ಬಂದಿದೆ.

ಅತ್ಯಾಚಾರದ ವಿಡಿಯೋ ಬಂದ ತಕ್ಷಣವೇ ಸಂತ್ರಸ್ತೆ ಚಿಕ್ಕಬಳ್ಳಾಪುರ ಗ್ರಾಮಾಂತರ ಮಹಿಳಾ  ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾಳೆ. ಸದ್ಯ ನಾಲ್ವರು ಆರೋಪಿಗಳನ್ನೂ ವಶಪಡಿಸಿಕೊಂಡಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ