ಪುತ್ರಿಯನ್ನು ಭುಜದ ಮೇಲೆ ಹೊತ್ತುಕೊಂಡು ಹೋಗುತ್ತಿದ್ದಾಗ ವ್ಯಕ್ತಿ ಮೇಲೆ ಗುಂಡಿನ ದಾಳಿ: ಆರೋಗ್ಯ ಸ್ಥಿತಿ ಚಿಂತಾಜನಕ - Mahanayaka
12:10 AM Saturday 23 - August 2025

ಪುತ್ರಿಯನ್ನು ಭುಜದ ಮೇಲೆ ಹೊತ್ತುಕೊಂಡು ಹೋಗುತ್ತಿದ್ದಾಗ ವ್ಯಕ್ತಿ ಮೇಲೆ ಗುಂಡಿನ ದಾಳಿ: ಆರೋಗ್ಯ ಸ್ಥಿತಿ ಚಿಂತಾಜನಕ

15/08/2023


Provided by

ವ್ಯಕ್ತಿಯೊಬ್ಬರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಶಹಜಹಾನ್‌ಪುರದಲ್ಲಿ ನಡೆದಿದೆ. ಷಹಜಹಾನ್‌ಪುರದಲ್ಲಿ ವ್ಯಕ್ತಿಯೊಬ್ಬ ತನ್ನ ಮಗಳನ್ನು ತನ್ನ ಭುಜದ ಮೇಲೆ ಹೊತ್ತುಕೊಂಡು ಹೋಗುತ್ತಿದ್ದಾಗ ಗುಂಡಿನ ದಾಳಿ ಮಾಡಲಾಗಿದೆ. ಈ ವೇಳೆ ಮಗಳಿಗೆ ಯಾವುದೇ ಗಾಯವಾಗಿಲ್ಲ. ಆದರೆ ವ್ಯಕ್ತಿಯ ಸ್ಥಿತಿ ಚಿಂತಾಜನಕವಾಗಿದೆ.

ಸಿಸಿಟಿವಿ ದೃಶ್ಯಗಳಲ್ಲಿ ವ್ಯಕ್ತಿಯೊಬ್ಬ ಕಿರಿದಾದ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವುದನ್ನು ಕಾಣಬಹುದು. ಆಗ ಎದುರಿನಿಂದ ಬಂದ ವ್ಯಕ್ತಿಯೊಬ್ಬ ಗನ್ ಹೊರತೆಗೆದು ಅವನನ್ನು ಹತ್ತಿರದಿಂದ ಶೂಟ್ ಮಾಡಿ ಬೈಕಲ್ಲಿ ಕುಳಿತು ಸ್ಥಳದಿಂದ ಪರಾರಿಯಾಗಿದ್ದಾನೆ. ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ. ಶೋಯೆಬ್ ಎಂಬ 30 ವರ್ಷದ ಉದ್ಯಮಿ ಶಹಜಹಾನ್‌ಪುರದಲ್ಲಿರುವ ತನ್ನ ಪೂರ್ವಿಕರ ಮನೆಗೆ ಬಂದಿದ್ದಾಗ ಈ ಘಟನೆ ನಡೆದಿದೆ.
ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳಾದ ಗುಫ್ರಾನ್ ಮತ್ತು ನದೀಮ್ ಅವರನ್ನು ಬಂಧಿಸಲಾಗಿದೆ.

ದಾಳಿಕೋರರು ಬಳಸಿದ್ದ ಬೈಕ್ ಅನ್ನು ಸಹ ವಶಪಡಿಸಿಕೊಳ್ಳಲಾಗಿದೆ. ಮೂರನೇ ಆರೋಪಿ ತಾರಿಕ್ ಎಂಬಾತನನ್ನು ಬಂಧಿಸಲು ವಿಶೇಷ ತಂಡಗಳನ್ನು ರಚಿಸಲಾಗಿದೆ. ಆರೋಪಿಗಳಲ್ಲಿ ಒಬ್ಬ ಸಂತ್ರಸ್ತನ ಸೋದರ ಸಂಬಂಧಿಯಾಗಿದ್ದು, ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಈ ದಾಳಿ ನಡೆಸಲಾಗಿದೆ ಎಂಬ ಮಾಹಿತಿ ಸಿಕ್ಕಿದೆ.

ಇತ್ತೀಚಿನ ಸುದ್ದಿ