ವಿದ್ಯಾರ್ಥಿನಿಯರ ಹಾಸ್ಟೆಲ್ ಮುಂಭಾಗ ಅಶ್ಲೀಲ ಪ್ರದರ್ಶನ: ಆಟೋ ಚಾಲಕ ಅರೆಸ್ಟ್!

22/08/2023
ಮಡಿಕೇರಿ: ಮೆಡಿಕಲ್ ಕಾಲೇಜಿನಲ್ಲಿ ಅಶ್ಲೀಲ ವರ್ತನೆ ತೋರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಡಿಕೇರಿ ಪೊಲೀಸರು ಆರೋಪಿಯೋರ್ವನನ್ನು ಬಂಧಿಸಿದ್ದಾರೆ.
ಆಟೋ ಚಾಲಕ ಸಿಜಿಲ್(22) ಬಂಧಿತ ಆರೋಪಿಯಾಗಿದ್ದು, ಮೂರು ದಿನಗಳ ಹಿಂದೆ ಕಾಮುಕನೋರ್ವ ಹಾಸ್ಟೆಲ್ ಎದುರು ಅಶ್ಲೀಲ ಪ್ರದರ್ಶನ ಮಾಡಿದ್ದು, ವಿದ್ಯಾರ್ಥಿನಿಯರನ್ನು ಚುಡಾಯಿಸಿರುವುದೇ ಅಲ್ಲದೇ ಖಾಸಗಿ ಅಂಗ ಪ್ರದರ್ಶಿಸಿದ್ದ ಎನ್ನಲಾಗಿದೆ. ಘಟನೆಯ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿತ್ತು.
ಈ ಘಟನೆಯ ಬೆನ್ನಲ್ಲೇ ಹಾಸ್ಟೆಲ್ ಗೆ ಸೂಕ್ತ ರಕ್ಷಣೆ ನೀಡಬೇಕು ಎಂದು ಒತ್ತಾಯಿಸಿ, ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು. ಘಟನೆ ಸಂಬಂಧ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಇದೀಗ ಆರೋಪಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಈತನ ಜೊತೆಗೆ ಇನ್ನೂ ಕೆಲವರು ಕ್ಯಾಂಪಸ್ ಪ್ರವೇಶಿಸಿ ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ. ಅವರ ಬಂಧನಕ್ಕೂ ಪೊಲೀಸರು ಶೋಧ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ.