ಸಿಎಂ ಕಾರ್ಯಕ್ರಮದಲ್ಲಿ ಬಿರಿಯಾನಿ ತಿಂದ ಆರೋಗ್ಯ ಸಚಿವ ಸೇರಿದಂತೆ 145 ಮಂದಿ ಅಸ್ವಸ್ಥ! | ಓರ್ವ ವ್ಯಕ್ತಿಯ ಸಾವಿನ ಶಂಕೆ - Mahanayaka

ಸಿಎಂ ಕಾರ್ಯಕ್ರಮದಲ್ಲಿ ಬಿರಿಯಾನಿ ತಿಂದ ಆರೋಗ್ಯ ಸಚಿವ ಸೇರಿದಂತೆ 145 ಮಂದಿ ಅಸ್ವಸ್ಥ! | ಓರ್ವ ವ್ಯಕ್ತಿಯ ಸಾವಿನ ಶಂಕೆ

04/02/2021


Provided by

ಅಸ್ಸಾಂ: ಅಸ್ಸಾಂನ ಸಿಎಂ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಬಿರಿಯಾನಿ ಸೇವಿಸಿ ಸಚಿವರು ಸೇರಿದಂತೆ 145 ಜನರು ಅಸ್ವಸ್ಥರಾಗಿರುವ ಘಟನೆ ಅಸ್ಸಾಮಿನ ಕರ್ಬಿ ಅಂಗ್ಲಾಂಗ್ ಜಿಲ್ಲೆಯಲ್ಲಿ ನಡೆದಿದೆ.

ಮುಖ್ಯಮಂತ್ರಿ ಸರ್ಬಾನಂದ ಸೋನೊವಾಲ್ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ಕೋರ್ಸ್ ನ ಶೈಕ್ಷಣಿಕ ಉದ್ಘಾಟಿಸಿದ್ದರು. ದಿಫು ಮೆಡಿಕಲ್ ಕಾಲೇಜಿನಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಆರೋಗ್ಯ ಸಚಿವ ಹಿಮಾಂತ ಬಿಸ್ವಾ ಶರ್ಮಾ ಅವರು, ಆಹಾರ ಸೇವಿಸಿ ಅಸ್ವಸ್ಥಗೊಂಡಿದ್ದಾರೆ. ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದವರ ಪೈಕಿ ಮಂಗಳವಾರ ರಾತ್ರಿಯಿಂದ 145 ಮಂದಿ  ಗುವಾಹಟಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕಾರ್ಯಕ್ರಮದಲ್ಲಿ ಪ್ಯಾಕ್ ಮಾಡಲಾಗಿದ್ದ ಬಿರಿಯಾನಿಯನ್ನು ಹಂಚಲಾಗಿತ್ತು. ಒಟ್ಟು 8 ಸಾವಿರ ಜನರಿಗೆ ಇದೇ ಆಹಾರವನ್ನು ಹಂಚಲಾಗಿದೆ ಎಂದು ತಿಳಿದು ಬಂದಿದೆ. ಆಹಾರ ಸೇವಿಸಿದ ಬಳಿಕ ಹಲವರು ಅಸ್ವಸ್ಥರಾಗಿದ್ದಾರೆ.

ಒಟ್ಟು 145 ಜನರು ಆಸ್ಪತ್ರೆಗೆ ದಾಖಲಾಗಿದ್ದು, ಅವರ ಪೈಕಿ 28 ಮಂದಿ ಚೇತರಿಸಿಕೊಂಡಿದ್ದು, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇನ್ನೂ 117 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ. ಮಾಹಿತಿಗಳ ಪ್ರಕಾರ ವ್ಯಕ್ತಿಯೊಬ್ಬರು ರಾತ್ರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಆದರೆ ಈ ಬಗ್ಗೆ ಇನ್ನೂ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ.

ಇತ್ತೀಚಿನ ಸುದ್ದಿ