ಮನೆ ಬಾಡಿಗೆ ವಿಚಾರದಲ್ಲಿ ಗಲಾಟೆ: ಯುವಕನ ಕೊಲೆಗೆ ಯತ್ನಿಸಿದ ಆರೋಪಿಯ ಬಂಧನ - Mahanayaka

ಮನೆ ಬಾಡಿಗೆ ವಿಚಾರದಲ್ಲಿ ಗಲಾಟೆ: ಯುವಕನ ಕೊಲೆಗೆ ಯತ್ನಿಸಿದ ಆರೋಪಿಯ ಬಂಧನ

hamza
30/08/2023


Provided by

ಮಂಗಳೂರು ನಗರದ ಕೊಣಾಜೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಡೆದ ಯುವಕನ ಕೊಲೆ ಯತ್ನ ಪ್ರಕರಣದ ಆರೋಪಿಯನ್ನು ಮಂಗಳೂರು ನಗರ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಸಮೀರ್ ಹಂಝ (39) ಎಂದು ಗುರುತಿಸಲಾಗಿದೆ. ಆಗಸ್ಟ್ 12 ರಂದು ಕೊಣಾಜೆ ಪೊಲೀಸ್ ಠಾಣೆ ವ್ಯಾಪ್ತಿಯ ನೆತ್ತಿಲಪದವು ನಿವಾಸಿ ಮನ್ಸೂರ್ ಎಂಬುವವರಲ್ಲಿ ಮನೆ ಬಾಡಿಗೆ ವಿಚಾರದಲ್ಲಿ ಆರೋಪಿ ಸಮೀರ್ ಹಂಝ ಗಲಾಟೆ ಮಾಡಿ ತನ್ನಲ್ಲಿದ್ದ ತಲವಾರಿನಿಂದ ಹಲ್ಲೆ ನಡೆಸಿ ಕೊಲೆ ಯತ್ನ ನಡೆಸಿದ್ದು ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಆರೋಪಿ ಸಮೀರ್ ಹಂಝ ಈ ಹಿಂದೆ ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಇಲ್ಯಾಸ್ ಕೊಲೆ ಪ್ರಕರಣ, ಕೊಣಾಜೆ ಪೊಲೀಸ್ ಠಾಣೆಯಲ್ಲಿ 3 ಕೊಲೆ ಯತ್ನ ಪ್ರಕರಣಗಳು, ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಹಲ್ಲೆ, ಅಪಹರಣ, ಕೊಲೆ ಯತ್ನ ಪ್ರಕರಣ ಹೀಗೆ ಒಟ್ಟು 10 ಪ್ರಕರಣಗಳಲ್ಲಿ ಭಾಗಿಯಾಗಿದ್ರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇತ್ತೀಚಿನ ಸುದ್ದಿ