ರಾಜರಾಜೇಶ್ವರಿ ನಗರ ಪೊಲೀಸರ ಕಾರ್ಯಾಚರಣೆ: ಕುಖ್ಯಾತ ಆರೋಪಿ ಅರೆಸ್ಟ್

ಬೆಂಗಳೂರು: ಬೆಂಗಳೂರು ಪಶ್ಚಿಮ ವಿಭಾಗದ ರಾಜರಾಜೇಶ್ವರಿ ನಗರ ಪೊಲೀಸರು ಕಾರ್ಯಾಚರಣೆ ನಡೆಸಿ ಕುಖ್ಯಾತ ಆರೋಪಿಯೋರ್ವನನ್ನು ಬಂಧಿಸಿದ್ದು, ಬಂಧಿತ ಆರೋಪಿಯಿಂದ ಸುಮಾರು 4,50,000 ರೂ ಬೆಲೆ ಬಾಳುವ 80 ಗ್ರಾಂ ತೂಕದ ಚಿನ್ನದ ಆಭರಣ ಹಾಗೂ 2 ದ್ವಿ ಚಕ್ರ ವಾಹನಗಳ ವಶಪಡಿಸಿಕೊಳ್ಳಲಾಗಿದೆ.
ರಾಜರಾಜೇರಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಬಿ.ಇ.ಎ.ಎಲ್ ಲೇಔಟ್ ನಲ್ಲಿ ವಾಸವಾಗಿದ್ದ ವಿರಾಮದಾಯ ಮನೆಯಲ್ಲಿ ಚಿನ್ನದ ಆಭರಣಗಳನ್ನು ಕಳವು ಮಾಡಿಕೊಂಡು ಹೋಗಿದ್ದು, ಈ ಬಗ್ಗೆ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಕಳವು ಈ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆಯನ್ನು ಕೈಗೊಂಡ ಪೊಲೀಸರು, ಸೆ.2ರಂದು ಆರೋಪಿಯನ್ನು ದಸ್ತಗಿರಿ ಮಾಡಿದ್ದು, ಆರೋಪಿಯು ನೀಡಿದ ಮಾಹಿತಿ ಮೇರೆಗೆ ಸುಮಾರು 4,50,000/-ರೂ ಬೆಲೆ ಬಾಳುವ ಚಿನ್ನದ ಆಭರಣಗಳು, ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳವು ಮಾಡಿದ್ದ ಒಂದು ಹೊಂಡಾ ಡಿಯೋ ವಾಹನ ಮತ್ತು ಕನ್ನ ಕಳವು ಮಾಡಲು ಬಳಸಿದ್ದ ಯಮಹಾ ಎಫ್ ಜೆಡ್ ಮೋಟಾರ್ ಸೈಕಲ್ ಗಳನ್ನು ವಶಪಡಿಸಿಕೊಂಡಿದ್ದಾರೆ.
ಆರೋಪಿಯು ಈ ಹಿಂದೆ ರಾಜರಾಜೇಶ್ವರಿ ನಗರ, ಬನಶಂಕರಿ ಚೆನ್ನಮ್ಮನಕರ ಅಚ್ಚುಕಟ್ಟು, ಜಯನಗರ, ಜೆ.ಪಿ.ನಗರ, ಕೆಂಗೇರಿ, ಬೆಳಂದೂರು ಹಾಗೂ ಇನ್ನಿತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕನ್ನ ಕಳವು, ಸುಲಿಗೆ ಹಾಗೂ ವಾಹನ ಕಳವು ಪ್ರಕರಣಗಳಲ್ಲಿ ಭಾಗಿಯಾಗಿದ್ದು, ಈತನು ಮಾನ್ಯ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ಇದ್ದುದರಿಂದ ಈತನ ವಿರುದ್ಧ ವಾರೆಂಟ್ ಗಳನ್ನು ಹಾಗೂ ಪ್ರೊಕ್ಲಮೆಷನ್ ಗಳನ್ನು ಘನ ನ್ಯಾಯಾಲಯ ಹೊರಡಿಸಿರುತ್ತದೆ.
ಈ ಕಾರ್ಯಚರಣೆಯನ್ನು ಬೆಂಗಳೂರು ನಗರದ ಪಶ್ಚಿಮ ವಿಭಾಗದ ಉಪ-ಪೊಲೀಸ್ ಆಯುಕ್ತ ಲಕ್ಷ್ಮಣ್.ಬ.ನಿಂಬರಗಿ, ಕೆಂಗೇರಿಗೇಟ್ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಭರತ್, ಎಸ್.ರೆಡ್ಡಿ ಮಾರ್ಗದರ್ಶನದಲ್ಲಿ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಬಿ.ಎ. ಶಿವಕುಮಾರ್ ರವರ ನೇತೃವಲ್ಲಿ ಅಪರಾಧ ವಿಭಾಗದ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.