14 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮೆರೆಸಿಕೊಂಡಿದ್ದ ಆರೋಪಿ ಅರೆಸ್ಟ್ - Mahanayaka

14 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮೆರೆಸಿಕೊಂಡಿದ್ದ ಆರೋಪಿ ಅರೆಸ್ಟ್

rajesh
06/09/2023


Provided by

ಮಂಗಳೂರಿನ ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣವೊಂದರಲ್ಲಿ 14 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮೆರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ರಾಜೇಶ ಎಂದು ಗುರುತಿಸಲಾಗಿದೆ. ಕಾಸರಗೋಡಿ ನಲ್ಲಿ ಎಎಸ್ ಐ ಓಂ ದಾಸ್ ಹಾಗೂ ಹೆಚ್ ಸಿ ಮಚ್ಚೆಂದ್ರನಾಥ್ ರವರು ಆರೋಪಿಯನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ನ್ಯಾಯಾಲಯ ಆರೋಪಿಗೆ 14 ದಿನಗಳ ತನಕ ನ್ಯಾಯಾಂಗ ಬಂಧನ ವಿಧಿಸಿದೆ. ಆರೋಪಿಯನ್ನು ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿರಿಸಲಾಗಿದೆ.

ಇತ್ತೀಚಿನ ಸುದ್ದಿ