ಪ್ರೇಮದಾಸ ಸ್ಟೇಡಿಯಂನಲ್ಲಿ ಸಿರಾಜ್ ಮಾರಕ ದಾಳಿಗೆ ಲಂಕಾ ಉಡೀಸ್: ಏಷ್ಯಾ‌ಕಪ್ ಗೆದ್ದ ಭಾರತ; ಟೀಂ ಇಂಡಿಯಾ‌ ಮಡಿಲಿಗೆ 8 ನೇ ಟ್ರೋಫಿ - Mahanayaka

ಪ್ರೇಮದಾಸ ಸ್ಟೇಡಿಯಂನಲ್ಲಿ ಸಿರಾಜ್ ಮಾರಕ ದಾಳಿಗೆ ಲಂಕಾ ಉಡೀಸ್: ಏಷ್ಯಾ‌ಕಪ್ ಗೆದ್ದ ಭಾರತ; ಟೀಂ ಇಂಡಿಯಾ‌ ಮಡಿಲಿಗೆ 8 ನೇ ಟ್ರೋಫಿ

17/09/2023


Provided by

ಕೊಲಂಬೋದ ಆರ್​. ಪ್ರೇಮದಾಸ ಮೈದಾನದಲ್ಲಿ ನಡೆದ ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯಲ್ಲಿ ಶ್ರೀಲಂಕಾ ವಿರುದ್ಧ ನಡೆದ ಫೈನಲ್ ಪಂದ್ಯದಲ್ಲಿ 10 ವಿಕೆಟ್ ಅಂತರದ ಭರ್ಜರಿ ಗೆಲುವು ದಾಖಲಿಸಿರುವ ಭಾರತ ಏಷ್ಯಾ ಕಪ್ ಗೆದ್ದುಕೊಂಡಿದೆ.

ಈ ಮೂಲಕ ಭಾರತ ದಾಖಲೆಯ 8ನೇ ಸಲ ಟ್ರೋಫಿಯನ್ನು ತನ್ನದಾಗಿಸಿಕೊಂಡಿದೆ. ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೀಲಂಕಾ ಮೊದಲು ಆಯ್ದುಕೊಂಡಿತ್ತು. ಆದರೆ ಮೊಹಮ್ಮದ್ ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಲಂಕಾ ಕೇವಲ 15.2 ಓವರ್‌ಗಳಲ್ಲಿ 50 ರನ್ನಿಗೆ ತನ್ನೆಲ್ಲ ವಿಕೆಟ್‌ಗಳನ್ನು ಕಳೆದುಕೊಂಡಿತು. ಜೀವನಶ್ರೇಷ್ಠ ಬೌಲಿಂಗ್ ಸಾಧನೆ ಮಾಡಿದ ಸಿರಾಜ್ ಏಳು ಓವರ್‌ಗಳಲ್ಲಿ 21 ರನ್ ಕೊಟ್ಟು ಆರು ವಿಕೆಟ್ ಕಬಳಿಸಿದರು. ಇದರಲ್ಲಿ ಒಂದೇ ಓವರ್‌ನಲ್ಲಿ ಮೇಡನ್ ಸಹಿತ ನಾಲ್ಕು ವಿಕೆಟ್ ಕಬಳಿಸಿದರು. ಹಾರ್ದಿಕ್ ಪಾಂಡ್ಯ ಮೂರು ಹಾಗೂ ಜಸ್‌ಪ್ರೀತ್ ಬೂಮ್ರಾ ಒಂದು ವಿಕೆಟ್ ಕಬಳಿಸಿದರು.

ಬಳಿಕ ಗುರಿ ಬೆನ್ನಟ್ಟಿದ ಭಾರತ 6.1 ಓವರ್‌ಗಳಲ್ಲಿ ಗೆಲುವಿನ ದಡ ಸೇರಿತು. ಶುಭಮನ್ ಗಿಲ್ 27 ಹಾಗೂ ಇಶಾನ್ ಕಿಶನ್ 23 ರನ್ ಗಳಿಸಿ ಔಟಾಗದೆ ಉಳಿದರು.

ಸಿರಾಜ್ ವಿಶ್ವದಾಖಲೆ:
ಏಷ್ಯಾಕಪ್​ನ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ.4ನೇ ಓವರ್​ನ ಮೊದಲ ಎಸೆತದಲ್ಲಿ ಪಾತುಮ್ ನಿಸ್ಸಂಕಾ (2) ವಿಕೆಟ್ ಪಡೆದ ಸಿರಾಜ್, ಮೂರನೇ ಎಸೆತದಲ್ಲಿ ಸದೀರ ಸಮರವಿಕ್ರಮ ಎಲ್​ಬಿಡಬ್ಲ್ಯೂ ಬಲೆಗೆ ಕೆಡವಿದರು. ಇನ್ನು ನಾಲ್ಕನೇ ಎಸೆತದಲ್ಲಿ ಚರಿತ್ ಅಸಲಂಕಾ ಅವರನ್ನು ಔಟ್ ಮಾಡಿದರು.

ಆರನೇ ಎಸೆತದಲ್ಲಿ ಧನಜಂಯ ಡಿಸಿಲ್ವಾ ಕೀಪರ್ ಕ್ಯಾಚ್ ಔಟ್ ನೀಡಿ ನಿರ್ಗಮಿಸಿದರು. ಒಂದೇ ಓವರ್​ನಲ್ಲಿ 4 ವಿಕೆಟ್ ಕಬಳಿಸಿದ ಸಿರಾಜ್, 6ನೇ ಓವರ್​ನ 4ನೇ ಎಸೆತದಲ್ಲಿ ಶ್ರೀಲಂಕಾ ತಂಡದ ನಾಯಕ ದಸುನ್ ಶಾನಕ ಅವರನ್ನು ಕ್ಲೀನ್ ಬೌಲ್ಡ್ ಮಾಡಿದರು. ಇದರೊಂದಿಗೆ ಕೇವಲ 4 ರನ್ ನೀಡಿ 5 ವಿಕೆಟ್ ಕಬಳಿಸಿದ ವಿಶೇಷ ಸಾಧನೆ ಮಾಡಿದರು.

ಅಷ್ಟೇ ಅಲ್ಲದೆ ಅತೀ ಕಡಿಮೆ ಎಸೆತಗಳಲ್ಲಿ 5 ವಿಕೆಟ್ ಕಬಳಿಸಿದ ವಿಶ್ವದ 2ನೇ ಬೌಲರ್ ಎಂಬ ವಿಶ್ವ ದಾಖಲೆಯನ್ನು ಕೂಡ ತಮ್ಮದಾಗಿಸಿಕೊಂಡರು. ಇದಕ್ಕೂ ಮುನ್ನ ಚಾಮಿಂಡ ವಾಸ್ ಈ ಸಾಧನೆ ಮಾಡಿದ್ದರು.
2003 ರಲ್ಲಿ ಶ್ರೀಲಂಕಾದ ಮಾಜಿ ವೇಗಿ ಚಾಮಿಂಡ ವಾಸ್ ಬಾಂಗ್ಲಾದೇಶ್ ವಿರುದ್ಧ ಕೇವಲ 16 ಎಸೆತಗಳಲ್ಲಿ 5 ವಿಕೆಟ್ ಕಬಳಿಸಿದ್ದರು. ಇದೀಗ ಈ ವಿಶ್ವ ದಾಖಲೆಯನ್ನು ಸಿರಾಜ್ ಸರಿಗಟ್ಟಿದ್ದಾರೆ.

ಮೊಹಮ್ಮದ್ ಸಿರಾಜ್ ಕೂಡ ಕೇವಲ 16 ಎಸೆತಗಳಲ್ಲಿ 5 ವಿಕೆಟ್ ಉರುಳಿಸಿ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ ಪರ ಅತ್ಯಂತ ವೇಗವಾಗಿ 5 ವಿಕೆಟ್ ಕಬಳಿಸಿದ ಬೌಲರ್ ಎನಿಸಿಕೊಂಡಿದ್ದಾರೆ.

ಮೊಹಮ್ಮದ್ ಸಿರಾಜ್ ಕೂಡ ಕೇವಲ 16 ಎಸೆತಗಳಲ್ಲಿ 5 ವಿಕೆಟ್ ಉರುಳಿಸಿ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ ಪರ ಅತ್ಯಂತ ವೇಗವಾಗಿ 5 ವಿಕೆಟ್ ಕಬಳಿಸಿದ ಬೌಲರ್ ಎನಿಸಿಕೊಂಡಿದ್ದಾರೆ.

ಅಲ್ಲದೆ ಚಾಮಿಂಡ ವಾಸ್ ಬಳಿಕ ಅತೀ ಕಡಿಮೆ ಎಸೆತಗಳಲ್ಲಿ 5 ವಿಕೆಟ್ ಕಬಳಿಸಿದ ವಿಶ್ವದ 2ನೇ ಬೌಲರ್ ಎಂಬ ದಾಖಲೆಯನ್ನೂ ಕೂಡ ಮೊಹಮ್ಮದ್ ಸಿರಾಜ್ ತಮ್ಮದಾಗಿಸಿಕೊಂಡಿದ್ದಾರೆ.

ಈ ಪಂದ್ಯದಲ್ಲಿ 7 ಓವರ್​ಗಳನ್ನು ಎಸೆದ ಮೊಹಮ್ಮದ್ ಸಿರಾಜ್ ಕೇವಲ 21 ರನ್ ನೀಡಿ 6 ವಿಕೆಟ್ ಕಬಳಿಸಿದರು. ಸಿರಾಜ್ ಅವರ ಈ ಕರಾರುವಾಕ್ ದಾಳಿಗೆ ತತ್ತರಿಸಿದ ಶ್ರೀಲಂಕಾ ತಂಡವು ಕೇವಲ 50 ರನ್​ಗಳಿಗೆ ಆಲೌಟ್ ಆಯಿತು.

ಇತ್ತೀಚಿನ ಸುದ್ದಿ