ಶುರುವಾಯ್ತಾ ಆಂತರಿಕ ಕಲಹ..? ಭಾರತವನ್ನು ಪ್ರಚೋದಿಸಲು ನಾವು ಪ್ರಯತ್ನಿಸುತ್ತಿಲ್ಲ ಎಂದಿದ್ಯಾಕೆ ಕೆನಡಾ ಪ್ರಧಾನಿ..? - Mahanayaka

ಶುರುವಾಯ್ತಾ ಆಂತರಿಕ ಕಲಹ..? ಭಾರತವನ್ನು ಪ್ರಚೋದಿಸಲು ನಾವು ಪ್ರಯತ್ನಿಸುತ್ತಿಲ್ಲ ಎಂದಿದ್ಯಾಕೆ ಕೆನಡಾ ಪ್ರಧಾನಿ..?

19/09/2023


Provided by

ಸಿಖ್ ಪ್ರತ್ಯೇಕತಾವಾದಿ ನಾಯಕನ ಹತ್ಯೆಯಲ್ಲಿ ಭಾರತದ ಏಜೆಂಟ್‌ಗಳ ಕೈವಾಡವಿದೆ ಎಂದು ಹೇಳುವ ಮೂಲಕ ನಾವು ಭಾರತವನ್ನು ಪ್ರಚೋದಿಸಲು ನಾವು ಪ್ರಯತ್ನಿಸುತ್ತಿಲ್ಲ. ಆದರೆ, ಈ ಸಮಸ್ಯೆಯನ್ನು ಭಾರತವು ಸರಿಯಾಗಿ ಪರಿಹರಿಸಬೇಕೆಂದು ನಾವು ಬಯಸುತ್ತೇವೆ. ಈ ಬಗ್ಗೆ ನಮಗೆ ಉತ್ತರ ಬೇಕಾಗಿದೆ ಎಂದು ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಹೇಳಿದ್ದಾರೆ.

‘ಭಾರತ ಸರ್ಕಾರವು ಈ ವಿಷಯವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಬೇಕಾಗಿದೆ. ನಾವು ಅದನ್ನು ಮಾಡುತ್ತಿದ್ದೇವೆ. ನಾವು ಪ್ರಚೋದಿಸಲು ಅಥವಾ ಸಮಸ್ಯೆ ಉಲ್ಬಣಗೊಳ್ಳಲು ನೋಡುತ್ತಿಲ್ಲ’ ಎಂದು ಅವರು ತಿಳಿಸಿದ್ದಾರೆ.

ಸಿಖ್ ಪ್ರತ್ಯೇಕತಾವಾದಿ ನಾಯಕನ ಹತ್ಯೆಯಲ್ಲಿ ಭಾರತದ ಕೈವಾಡವಿದೆ ಎಂದು ಆರೋಪಿಸಿ ಕೆನಡಾದಿಂದ ಹಿರಿಯ ರಾ ಅಧಿಕಾರಿಯನ್ನು ಉಚ್ಛಾಟಿಸಲಾಗಿತ್ತು. ಅದರ ಬೆನ್ನಲ್ಲೇ ಭಾರತ ಕೂಡಾ ಕೆನಡಾ ರಾಜತಾಂತ್ರಿಕರನ್ನು ಭಾರತದಿಂದ ಉಚ್ಛಾಟನೆ ಮಾಡಿತ್ತು.

ಜೂನ್‌ನಲ್ಲಿ ಬ್ರಿಟಿಷ್ ಕೊಲಂಬಿಯಾದಲ್ಲಿ ನಡೆದ ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಭಾರತೀಯ ಏಜೆಂಟರಿಗೆ ಸಂಬಂಧವಿದೆ ಎಂದು ತನಗೆ ನಂಬಲರ್ಹ ಮಾಹಿತಿ ಸಿಕ್ಕಿರುವುದಾಗಿ ಕೆನಡಾ ಹೇಳಿತ್ತು.
ಬ್ರಿಟೀಷ್ ಕೊಲಂಬಿಯಾದ ಸರ್ರೆಯಲ್ಲಿರುವ ಸಿಖ್ ಸಾಂಸ್ಕೃತಿಕ ಕೇಂದ್ರದ ಹೊರಗೆ ಸಿಖ್ ಪ್ರತ್ಯೇಕತವಾದಿ ನಾಯಕ ಹರ್ದೀಪ್ ಸಿಂಗ್ ನಿಜ್ಜರ್ ಅವರನ್ನು ಜೂನ್ 18 ರಂದು ಗುಂಡಿಕ್ಕಿ ಕೊಲ್ಲಲಾಗಿತ್ತು. ಆದರೆ, ಈ ಕೊಲೆಯಲ್ಲಿ ತನ್ನ ಏಜೆಂಟ್‌ಗಳ ಪಾತ್ರವಿಲ್ಲ ಎಂದು ಭಾರತ ಸ್ಪಷ್ಟಪಡಿಸಿದೆ.

ನಿಷೇಧಿತ ಖಲಿಸ್ತಾನ್ ಟೈಗರ್ ಫೋರ್ಸ್ (ಕೆಟಿಎಫ್) ಮುಖ್ಯಸ್ಥ ಮತ್ತು ಭಾರತದ ಮೋಸ್ಟ್ ವಾಂಟೆಡ್ ಭಯೋತ್ಪಾದಕರಲ್ಲಿ ಒಬ್ಬನಾಗಿದ್ದ, ತಲೆಗೆ 10 ಲಕ್ಷ ರೂಪಾಯಿ ನಗದು ಬಹುಮಾನವನ್ನು ಹೊಂದಿದ್ದ ನಿಜ್ಜರ್ (45) ನನ್ನು ಜೂನ್ 18 ರಂದು ಬ್ರಿಟಿಷ್ ಕೊಲಂಬಿಯಾದ ಪಶ್ಚಿಮ ಕೆನಡಾದ ಪ್ರಾಂತ್ಯದ ಸರ್ರೆಯ ಗುರುದ್ವಾರದ ಹೊರಗೆ ಇಬ್ಬರು ಅಪರಿಚಿತ ಬಂದೂಕುಧಾರಿಗಳಿಂದ ಗುಂಡಿಕ್ಕಿ ಕೊಂದು ಹಾಕಿದ್ದರು.

ಸೋಮವಾರ ಹೌಸ್ ಆಫ್ ಕಾಮನ್ಸ್‌ ನಲ್ಲಿ ಮಾತನಾಡಿದ ಟುಡ್ರೋ, ಕೆನಡಾದ ಭದ್ರತಾ ಏಜೆನ್ಸಿಗಳು ಭಾರತ ಸರ್ಕಾರದ ಏಜೆಂಟರು ಮತ್ತು ಕೆನಡಾದ ಪ್ರಜೆ ಹರ್ದೀಪ್ ಸಿಂಗ್ ನಿಜ್ಜರ್ ಅವರ ಹತ್ಯೆಯ ನಡುವಿನ ಸಂಭಾವ್ಯ ಸಂಪರ್ಕದ ವಿಶ್ವಾಸಾರ್ಹ ಆರೋಪಗಳ ಕುರಿತು ತನಿಖೆ ನಡೆಸುತ್ತಿವೆ ಎಂದು ಟ್ರೂಡೊ ಹೇಳಿದರು. ಟ್ರುಡೋ ಅವರ ಸಂಸತ್ತಿನಲ್ಲಿ ನೀಡಿದ ಹೇಳಿಕೆ ನಂತರ ಹಿರಿಯ ಭಾರತೀಯ ರಾಜತಾಂತ್ರಿಕರನ್ನು”ಹೊರಹಾಕಲು ಆದೇಶ ನೀಡಿರುವುದನ್ನು ಕೆನಡಾದ ವಿದೇಶಾಂಗ ಸಚಿವೆ ಮೆಲಾನಿ ಜೋಲಿ ದೃಢಪಡಿಸಿದ್ದರು.

ಇತ್ತೀಚಿನ ಸುದ್ದಿ