ಇಬ್ಬರು ಯುವಕರ ಬರ್ಬರ ಹತ್ಯೆ | ಓರ್ವನ ಸ್ಥಿತಿ ಗಂಭೀರ - Mahanayaka

ಇಬ್ಬರು ಯುವಕರ ಬರ್ಬರ ಹತ್ಯೆ | ಓರ್ವನ ಸ್ಥಿತಿ ಗಂಭೀರ

08/02/2021


Provided by

ಮೈಸೂರು: ಆಸ್ತಿ ವಿಚಾರ ಹಾಗೂ ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಇಬ್ಬರು ಯುವಕರನ್ನು ಬರ್ಬರವಾಗಿ ಹತ್ಯೆ ನಡೆಸಲಾಗಿದ್ದು,  ಯುವಕರ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಲಾಗಿದ್ದು, ಇಬ್ಬರು ಮೃತಪಟ್ಟು ಓರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ.

ಕಿರಣ್(29) ಮತ್ತು ಕಿಶಾನ್(29) ಹತ್ಯೆಗೀಡಾದವರಾಗಿದ್ದಾರೆ. ಮಧು ಎಂಬ ಯುವಕನ ಸ್ಥಿತಿ ಗಂಭೀರವಾಗಿದ್ದು, ಆತನನ್ನು ಕೆ.ಆರ್.ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಸ್ನೇಹಿತರ ಇನ್ನೊಂದು ತಂಡ ಮಚ್ಚಿನಿಂದ ಮನಸೋ ಇಚ್ಛೆ ಹಲ್ಲೆ ನಡೆಸಿದೆ ಎಂದು ಹೇಳಲಾಗಿದ್ದು,  ಪರಿಣಾಮವಾಗಿ ಕಿಶನ್ ಹಾಗೂ ಕಿರಣ್ ಮೃತಪಟ್ಟಿದ್ದಾರೆ. ಮಧು ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಬೆಳಗ್ಗೆ ರಕ್ತದ ಮಡುವಲ್ಲಿ ಬಿದ್ದಿದ್ದ ಮೃತದೇಹಗಳನ್ನು ಕಂಡು ಸ್ಥಳೀಯರು ಬೆಚ್ಚಿ ಬಿದ್ದಿದ್ದು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಘಟನಾ ಸ್ಥಳಕ್ಕೆ ಡಿಸಿಪಿ ಡಾ.ಎ.ಎನ್.ಪ್ರಕಾಶ್ ಗೌಡ, ೆಸಿಪಿ ಪೂರ್ಣಚಂದ್ರ,  ಕೆ.ಆರ್. ಪೊಲೀಸ್ ಠಾಣೆ ಇನ್​​ ಸ್ಪೆಕ್ಟರ್, ಶ್ವಾನದಳ, ಬೆರಳಚ್ಚು ತಂಡ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಗಳ ಬಂಧನಕ್ಕೆ ಪೊಲೀಸರು ಶೋಧ ಆರಂಭಿಸಿದ್ದಾರೆ.

ಇತ್ತೀಚಿನ ಸುದ್ದಿ