ಬೆಂಗಳೂರು ಬಂದ್ : ಪ್ರತಿಭಟನಾ ಮೆರವಣಿಗೆಗೂ ಮುನ್ನವೇ ಕುರುಬೂರು ಶಾಂತಕುಮಾರ್ ಪೊಲೀಸ್ ವಶಕ್ಕೆ

ಬೆಂಗಳೂರು: ಬೆಂಗಳೂರು ಬಂದ್ ಗೆ ಕರೆ ನೀಡಿರುವ ರೈತ ಮುಖಂಡ ಕುರುಬೂರು ಶಾಂತಕುಮಾರ್ ಅವರನ್ನು ಮೈಸೂರು ಬ್ಯಾಂಕ್ ಸರ್ಕಲ್ ಬಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕಾವೇರಿಗಾಗಿ ಇಂದು ಬೆಂಗಳೂರು ಬಂದ್ ಗೆ ಕರೆ ನೀಡಲಾಗಿದ್ದು, ಬೆಂಗಳೂರು ಬಂದ್ ಹಿನ್ನೆಲೆ ಬೆಳ್ಳಂಬೆಳಗ್ಗೆ ವಿವಿಧ ಸಂಘಟನೆಗಳಿಂದ ಪ್ರತಿಭಟನೆಗಳು ಆರಂಭಗೊಂಡಿದೆ. ಈ ವೇಳೆ ಕುರುಬೂರು ಶಾಂತಕುಮಾರ್ ಹಾಗೂ ಇತರೆ ಕೆಲವರನ್ನು ಮೈಸೂರು ಬ್ಯಾಂಕ್ ಸರ್ಕಲ್ ಬಳಿ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಪ್ರತಿಭಟನಾ ಮೆರವಣಿಗೆಗೂ ಮುನ್ನವೇ ಶಾಂತಕುಮಾರ್ ಹಾಗೂ ಇತರರನ್ನು ಖಾಕಿ ಪಡೆ ವಶಕ್ಕೆ ಪಡೆದಿದ್ದಾರೆ.
ಕಾವೇರಿಗಾಗಿ ಇಂದು ಬೆಂಗಳೂರು ಬಂದ್‌ಗೆ ಕರೆ ನೀಡಲಾಗಿದ್ದು, ಬೆಂಗಳೂರು ಬಂದ್ ಹಿನ್ನೆಲೆ ಬೆಳ್ಳಂಬೆಳಗ್ಗೆ ವಿವಿಧ ಸಂಘಟನೆಗಳಿಂದ ಪ್ರತಿಭಟನೆಗಳು ಆರಂಭಗೊಂಡಿದೆ. ಈ ವೇಳೆ ಕುರುಬೂರು ಶಾಂತಕುಮಾರ್ ಹಾಗೂ ಇತರೆ ಕೆಲವರನ್ನು ಮೈಸೂರು ಬ್ಯಾಂಕ್ ಸರ್ಕಲ್ ಬಳಿ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಪ್ರತಿಭಟನಾ ಮೆರವಣಿಗೆಗೂ ಮುನ್ನವೇ ಶಾಂತಕುಮಾರ್ ಹಾಗೂ ಇತರರನ್ನು ಖಾಕಿ ಪಡೆ ವಶಕ್ಕೆ ಪಡೆದಿದ್ದಾರೆ.
ಈ ಸಂದರ್ಭ ಮಾತನಾಡಿದ ಶಾಂತಕುಮಾರ್, ಪೊಲೀಸರು ಗೂಂಡಾಗಿರಿ ಮೂಲಕ ಚಳುವಳಿಯನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದ್ದಾರೆ. ಬೆಂಗಳೂರಿನ ಜನತೆ ಇದನ್ನು ಅರ್ಥ ಮಾಡಿಕೊಂಡು ಪ್ರತಿಯೊಬ್ಬರೂ ಬೀದಿಗಿಳಿಯಬೇಕು. ಸರ್ಕಾರಕ್ಕೆ ಸರಿಯಾದ ಪಾಠವನ್ನು ಕಲಿಸಬೇಕು. ಕರ್ನಾಟಕದ ರೈತರು ನಮಗೆ ಬೆಂಬಲ ನೀಡಿ ರಸ್ತೆಗಿಳಿಯಬೇಕು ಎಂದು ಮನವಿ ಮಾಡಿಕೊಂಡರು.