ರಕ್ತದಲ್ಲಿ ಪ್ರಧಾನಿ ಮೋದಿಗೆ ಪತ್ರ ಬರೆದ ನಟ ಪ್ರೇಮ್ - Mahanayaka
12:18 PM Wednesday 10 - December 2025

ರಕ್ತದಲ್ಲಿ ಪ್ರಧಾನಿ ಮೋದಿಗೆ ಪತ್ರ ಬರೆದ ನಟ ಪ್ರೇಮ್

actor prem
01/10/2023

ಬೆಂಗಳೂರು:  ಕಾವೇರಿ ವಿಚಾರವಾಗಿ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ. ಕಾವೇರಿ ನಮ್ಮದು. ಈ ವಿಚಾರವಾಗಿ ಕನ್ನಡಿಗರಿಗೆ ನ್ಯಾಯ ಒದಗಿಸುವಂತೆ ನಟ ಪ್ರೇಮ್ ಒತ್ತಾಯಿಸಿದ್ದಾರೆ.

ಕಾವೇರಿ ಹೋರಾಟಕ್ಕೆ ನಟ ಪ್ರೇಮ್ ಕೂಡ ಕೈಜೋಡಿಸಿದ್ದು, ರೈತರ, ಕನ್ನಡಿಗರ ಹೋರಾಟಕ್ಕೆ ಸಾಥ್ ನೀಡಿದ್ದಾರೆ. ಜತೆಗೆ ಪ್ರಧಾನಿ ನರೇಂದ್ರ ಮೊದಿಯವರಿಗೆ ರಕ್ತದಲ್ಲಿ ಪತ್ರ ಬರೆದಿದ್ದಾರೆ.

ಕಾವೇರಿ ವಿಚಾರವಾಗಿ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ. ಕಾವೇರಿ ನಮ್ಮದು. ಈ ವಿಚಾರವಾಗಿ ಕನ್ನಡಿಗರಿಗೆ ನ್ಯಾಯ ಒದಗಿಸುವಂತೆ ಪ್ರೇಮ್ ಒತ್ತಾಯಿಸಿದ್ದಾರೆ.

ರಾಜ್ಯದಲ್ಲಿ ಕಾವೇರಿ ನೀರಿಗಾಗಿ ಹೋರಾಟ ಭುಗಿಲೆದ್ದಿದೆ. ರೈತರು ಹಾಗೂ ಕನ್ನಡ ಪರ ಸಂಘಟನೆಗಳು ಪ್ರತಿಭಟನೆಯನ್ನು ಮುಂದುವರೆಸಿವೆ. ಇದರ ನಟ ನೆನಪಿರಲಿ ಪ್ರೇಮ್ ರೈತರ ಹೋರಾಟಕ್ಕೆ ಬೆಂಬಲ ನೀಡಿ ಮೋದಿ ಅವರಿಗೆ ರಕ್ತದಲ್ಲಿ ಪತ್ರ ಬರೆದಿದ್ದಾರೆ.

ಇತ್ತೀಚಿನ ಸುದ್ದಿ