'ನೀವ್ಯಾಕೆ ಮದುವೆ ಆಗಿಲ್ಲ..?'ಯುವತಿ ಪ್ರಶ್ನೆಗೆ ರಾಹುಲ್ ಗಾಂಧಿ ಕೊಟ್ಟ ಉತ್ತರವೇನು..? - Mahanayaka
7:18 PM Wednesday 19 - November 2025

‘ನೀವ್ಯಾಕೆ ಮದುವೆ ಆಗಿಲ್ಲ..?’ಯುವತಿ ಪ್ರಶ್ನೆಗೆ ರಾಹುಲ್ ಗಾಂಧಿ ಕೊಟ್ಟ ಉತ್ತರವೇನು..?

11/10/2023

ಜೈಪುರದ ಮಹಾರಾಣಿ ಕಾಲೇಜಿನ ವಿದ್ಯಾರ್ಥಿಗಳೊಂದಿಗೆ ರಾಹುಲ್‌ ಸಂವಾದ ನಡೆಸಿದರು. ಇದೇ ವೇಳೆ ವಿದ್ಯಾರ್ಥಿನಿಯೋರ್ವೆ, “ನೀವು ತುಂಬಾ ಸ್ಮಾರ್ಟ್‌ ಹಾಗೂ ಗುಡ್‌ ಲುಕಿಂಗ್‌ ಇದ್ದರೂ ಯಾಕೆ ಇನ್ನೂ ಮದುವೆ ಬಗ್ಗೆ ಯೋಚಿಸಿಲ್ಲ ಎಂದು ಪ್ರಶ್ನಿಸಿದ್ದಾರೆ. ಇದೇ ವೇಳೆ ರಾಹುಲ್‌ ಇದಕ್ಕೆ ಉತ್ತರಿಸಿ,

‘ನಾನು ನನ್ನ ಕೆಲಸದಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದರಿಂದ ಇನ್ನೂ ಮದುವೆಯಾಗಿಲ್ಲ ಎಂದರು.
ಇದೇ ವೇಳೆ ಮತ್ತೋರ್ವ ಯುವತಿಯು ಮುಖದ ಸೌಂದರ್ಯ ಕಾಪಾಡಲು ಏನನ್ನು ಹಚ್ಚುತ್ತಿರಾ? ಎಂದು ಪ್ರಶ್ನಿಸಿದ್ದಾರೆ. ಅದಕ್ಕೆ ಉತ್ತರಿಸಿದ ರಾಹುಲ್, ಯಾವುದೇ ಕ್ರಿಮ್ ಅಥವಾ ಸೋಪ್ ಬಳಸುವುದಿಲ್ಲ. ನೀರಿನಿಂದ ಮಾತ್ರ ತೊಳೆಯುತ್ತೇನೆ ಎಂದು ತಿಳಿಸಿದರು.

ನೆಚ್ಚಿನ ತಿನಿಸುಗಳ ಬಗ್ಗೆ ಕೇಳಿದಾಗ, ಹಾಗಲಕಾಯಿ, ಬಟಾಣಿ ಮತ್ತು ಪಾಲಕ್ ಹೊರತುಪಡಿಸಿ ಎಲ್ಲವನ್ನೂ ಚೆನ್ನಾಗಿ ತಿನ್ನುತ್ತೇನೆ. ನಾನು ಯಾವಾಗಲೂ ಹೊಸ ಸ್ಥಳಗಳನ್ನು ನೋಡಲು ಇಷ್ಟಪಡುತ್ತೇನೆ ಎಂದಿದ್ದಾರೆ.
ಸಮಾಜದಲ್ಲಿ ಮಹಿಳೆಯರ ವಿರುದ್ಧದ ತಾರತಮ್ಯ, ಆರ್ಥಿಕ ಸ್ವಾತಂತ್ರ್ಯ ಸೇರಿದಂತೆ ಹಲವು ಪ್ರಶ್ನೆಗಳನ್ನು ವಿದ್ಯಾರ್ಥಿಗಳು ಕೇಳಿದರು. ಇದಕ್ಕೆಲ್ಲಾ ರಾಹುಲ್ ಗಾಂಧಿ ಉತ್ತರ ನೀಡಿದರು.

ಇತ್ತೀಚಿನ ಸುದ್ದಿ