ಆಯುಧಪೂಜೆ ವೇಳೆ ಸರ್ಕಾರಿ ಕಚೇರಿಯಲ್ಲಿ ಅರಿಶಿನ-ಕುಂಕುಮ ಬಳಸುವಂತಿಲ್ಲ: ಈ ಆದೇಶದ ಹಿಂದಿನ ಉದ್ದೇಶ ಏನು ಗೊತ್ತಾ? - Mahanayaka

ಆಯುಧಪೂಜೆ ವೇಳೆ ಸರ್ಕಾರಿ ಕಚೇರಿಯಲ್ಲಿ ಅರಿಶಿನ-ಕುಂಕುಮ ಬಳಸುವಂತಿಲ್ಲ: ಈ ಆದೇಶದ ಹಿಂದಿನ ಉದ್ದೇಶ ಏನು ಗೊತ್ತಾ?

arishina kunkuma
19/10/2023


Provided by

ಆಯುಧಪೂಜೆ ಸಂದರ್ಭದಲ್ಲಿ ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ ಕಟ್ಟಡಗಳಲ್ಲಿ ರಾಸಾಯನಿಕಯುಕ್ತ ಅರಿಶಿನ-ಕುಂಕುಮ ಮತ್ತು ಇತರೆ ಬಣ್ಣಗಳನ್ನು ಕಚೇರಿಗಳ ಒಳಗೆ ಅಥವಾ ಕಾರಿಡಾರ್‌ ಗಳಲ್ಲಿ ಬಳಸಬಾರದು ಎಂದು‌ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ.

ಈ ಆದೇಶಕ್ಕೆ ಕೆಲವರು ವಿರೋಧ ವ್ಯಕ್ತಪಡಿಸಿರುವುದರಿಂದ ಈ ಸಂಬಂಧ ಸ್ಪಷ್ಟನೆ ಹೊರಡಿಸಿರುವ ಸರ್ಕಾರ, ಈ ಆದೇಶ  ಹೊಸತೇನಲ್ಲ. ಇವುಗಳು ಪಾರಂಪರಿಕ ಕಟ್ಟಡಗಳಾಗಿರುವುದರಿಂದ ರಾಸಾಯನಿಕಯುಕ್ತ ಬಣ್ಣಗಳು ನೆಲಹಾಸಿನ ಮೇಲೆ ಬಿದ್ದು, ಅವುಗಳ ಕಲೆ ಶಾಶ್ವತವಾಗಿ ಅಥವಾ ಬಹುಕಾಲ ಉಳಿಯುವುದರಿಂದ ಇದರಿಂದಾಗುವ ಹಾನಿ ತಪ್ಪಿಸಲು ಹಿಂದಿನ ಸರ್ಕಾರಗಳು ಪಾಲಿಸಿಕೊಂಡು ಬಂದಿದ್ದ ಸಂಪ್ರದಾಯವನ್ನೇ ನಾವು ಪಾಲಿಸಿದ್ದೇವೆ.

ಈ ಬಗ್ಗೆ ಸರ್ಕಾರದ ವಿರುದ್ಧ ನಡೆಸಲಾಗುತ್ತಿರುವ ಅಪಪ್ರಚಾರಕ್ಕೆ ಕಿವಿಗೊಡಬಾರದು ಎಂದು ಸಿಎಂ ಸಾಮಾಜಿಕ ಜಾಲತಾಣಗಳ ಮೂಲಕ ಮನವಿ ಮಾಡಿದ್ದಾರೆ.

ಇತ್ತೀಚಿನ ಸುದ್ದಿ