ಸಿಎಂ ಇಬ್ರಾಹಿಂ ಉಚ್ಚಾಟನೆ: ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಹೆಚ್.ಡಿ.ಕುಮಾರಸ್ವಾಮಿ ಆಯ್ಕೆ - Mahanayaka

ಸಿಎಂ ಇಬ್ರಾಹಿಂ ಉಚ್ಚಾಟನೆ: ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಹೆಚ್.ಡಿ.ಕುಮಾರಸ್ವಾಮಿ ಆಯ್ಕೆ

h d kumaraswamy
19/10/2023

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನಲೆ  ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರಿಯಾಗಿದ್ದು,ಮುಸ್ಲಿಂ ಮುಖಂಡ ಹಾಗೂ ಜೆಡಿಎಸ್‌ ರಾಜ್ಯಾಧ್ಯಕ್ಷರಾಗಿದ್ದ ಸಿಎಂ ಇಬ್ರಾಹಿಂ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ ಹಿನ್ನೆಲೆ ಜೆಡಿಎಸ್‌ ವರಿಷ್ಠರಾದ ಹೆಚ್‌.ಡಿ.ದೇವೇಗೌಡರು, ಗುರುವಾರ ಜೆಪಿ ಭವನದಲ್ಲಿ ಕೋರ್‌ ಕಮಿಟಿ ಸಭೆ ನಡೆಸಿದ್ದು, ಸಭೆಯಲ್ಲಿ ಶಾಸಕರು ಹಾಗೂ ಮುಖಂಡರ ಜೊತೆಗೆ ದೇವೇಗೌಡರು ಚರ್ಚೆ ನಡೆಸಿ,

ಸಿಎಂ ಇಬ್ರಾಹಿಂ ಅವರನ್ನ ಪಕ್ಷದಿಂದ ಉಚ್ಚಾಟಿಸಿದ್ದು, ನೂತನ ರಾಜ್ಯಾಧ್ಯಕ್ಷರಾಗಿ ಹೆಚ್‌.ಡಿ.ಕುಮಾರಸ್ವಾಮಿ ಅವರನ್ನು ಆಯ್ಕೆ ಮಾಡಿದ್ದಾರೆ.

ಸಿಎಂ ಇಬ್ರಾಹಿಂ ಹಾಗೂ ಕೆಲ ಪದಾಧಿಕಾರಿಗಳನ್ನ ಪಕ್ಷದಿಂದ ತೆಗೆದಿದ್ದೇವೆ. ಮಾಜಿ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ಅವರನ್ನ ಆಯ್ಕೆ ಸರ್ವಾನುಮತದಿಂದ ಆಯ್ಕೆ ಮಾಡಿದ್ದೇವೆ. ಕೆಲವು ಘಟಕಗಳ ಜೊತೆ ಚರ್ಚಿಸಿ ಒಂದು ನಿರ್ಣಯ ಮಾಡಿದ್ದೇವೆ. ಪಕ್ಷದ ನಿಯಮಾವಳಿ ಕೂಡ ಇದೆ. ಇಬ್ರಾಹಿಂ ಹೇಳಿಕೆಗಳನ್ನು ನಾನು ಪ್ರಸ್ತಾಪ ಮಾಡಲು ಹೋಗಲ್ಲ. ನಾವು ಬಿಜೆಪಿ ಜೊತೆ ಹೋಗುವ ಸನ್ನಿವೇಶ ಸೃಷ್ಟಿಸಿದ್ದು ಯಾರು ? ಎಂದು ಪ್ರಶ್ನಿಸಿದ್ದಾರೆ.

ನಾವು ಭಾರತೀಯ ಜನತಾ ಪಕ್ಷದ ಸರ್ಕಾರದಲ್ಲಿ ಭಾಗಿಯಾಗಿಲ್ಲ. ಲೋಕಸಭಾ ಚುನಾವಣೆ ಪೂರ್ವದಲ್ಲಿ ಮೈತ್ರಿ ಮಾಡಿಕೊಂಡಿದ್ದೇವೆ ಅಷ್ಟೇ. ಇದರಿಂದ ಜೆಡಿಎಸ್​ ಸಿದ್ಧಾಂತ ಅಥವಾ ನಾಯಕರಿಗೆ ಯಾವುದೇ ಸಮಸ್ಯೆಯಿಲ್ಲ. ಮುಸ್ಲಿಂ ನಾಯಕರನ್ನು ನಮ್ಮ ಪಕ್ಷದಲ್ಲಿ ಕಡೆಗಣನೆ ಮಾಡಿಲ್ಲ ಎಂದು ದೇವೇಗೌಡರು ಹೇಳಿದ್ದಾರೆ.

ಇತ್ತೀಚಿನ ಸುದ್ದಿ