ಸಾಮಾಜಿಕ ಬಹಿಷ್ಕಾರದಿಂದ ನೊಂದು ವ್ಯಕ್ತಿ ಆತ್ಮಹತ್ಯೆ! - Mahanayaka

ಸಾಮಾಜಿಕ ಬಹಿಷ್ಕಾರದಿಂದ ನೊಂದು ವ್ಯಕ್ತಿ ಆತ್ಮಹತ್ಯೆ!

chamarajanagara
20/10/2023


Provided by

ಚಾಮರಾಜನಗರ: ಸಾಮಾಜಿಕ ಬಹಿಷ್ಕಾರದಿಂದ ಮನನೊಂದು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಯಡವನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಯಡವನಳ್ಳಿ ಗ್ರಾಮದ ವೈ.ಎಸ್.ಶಿವರಾಜು(45) ನೇಣು ಆತ್ಮಹತ್ಯೆಗೆ ಶರಣಾದ ವ್ಯಕ್ತಿ.  ಮೃತನ ಸಹೋದರ ಮಹೇಶ್ ಎಂಬವರು ಬೇಗೂರು ಪೊಲೀಸ್ ಠಾಣೆಗೆ ದೂರು ಕೊಟ್ಟಿದ್ದು ಸಾಮಾಜಿಕ ಬಹಿಷ್ಕಾರ ಹಾಕಿದ್ದರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಆರೋಪಿಸಿದ್ದಾರೆ.

ಘಟನೆ ಸಂಬಂಧ ಯಡವನಹಳ್ಳಿ ಗ್ರಾಮದ ಯಜಮಾನರಾದ ಕೃಷ್ಣ, ಚಂದು, ರೇವನಾಯಕ, ಸಂತೋಷ್, ಸಂದೇಶ್, ವೆಂಕಟರಮಣನಾಯಕ, ನಿಂಗನಾಯಕ, ಚಿಕ್ಕಬೆಳ್ಳನಾಯಕ, ಆಲತ್ತೂರು ಮಹದೇವನಾಯಕ, ಡಿ.ಮಹದೇವಮನಾಯಕ, ದೇವನಾಯಕ, ಚಿನ್ನಸ್ವಾಮಿ ನಾಯಕ, ರಂಗಸ್ವಾಮಿನಾಯಕ ಎಂಬ 13 ಮಂದಿ ವಿರುದ್ಧ ಬೇಗೂರು ಪೊಲೀಸರು FIR ದಾಖಲಿಸಿದ್ದಾರೆ.

ಪ್ರತಿಭಟನೆ: ಆತ್ಮಹತ್ಯೆಗೆ ಕಾರಣರಾದವರನ್ನು ಕೂಡಲೇ ಬಂಧಿಸುವಂತೆ ಗ್ರಾಮಸ್ಥರು ಮತ್ತು ಸಂಬಂಧಿಕರು ಬೇಗೂರು ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು. ಈ ಸಂದರ್ಭದಲ್ಲಿ ಡಿವೈಎಸ್ಪಿ ಲಕ್ಷ್ಮಯ್ಯ ಸ್ಥಳಕ್ಕೆ ಭೇಟಿ ನೀಡಿ ಆರೋಪಿಗಳನ್ನು ಬಂಧಿಸುತ್ತೇವೆ, ತನಿಖೆ ಕೈಗೊಳ್ಳುತ್ತೇವೆ, ನ್ಯಾಯ ಕೊಡಿಸುವ ಭರವಸೆ ನೀಡಿದ ಬಳಿಕ ಪ್ರತಿಭಟನೆ ಕೈಬಿಟ್ಟರು.

 

ಇತ್ತೀಚಿನ ಸುದ್ದಿ