ಪರಶುರಾಮ ಥೀಮ್ ಪಾರ್ಕ್ ಪ್ರವಾಸಿ ತಾನವೆ ಹೊರತು ಧಾರ್ಮಿಕ ಕ್ಷೇತ್ರ ಅಲ್ಲ: ಸುನೀಲ್ ಕುಮಾರ್ - Mahanayaka
11:06 AM Saturday 23 - August 2025

ಪರಶುರಾಮ ಥೀಮ್ ಪಾರ್ಕ್ ಪ್ರವಾಸಿ ತಾನವೆ ಹೊರತು ಧಾರ್ಮಿಕ ಕ್ಷೇತ್ರ ಅಲ್ಲ: ಸುನೀಲ್ ಕುಮಾರ್

sunil kumar
22/10/2023


Provided by

ಉಡುಪಿ: ಪರಶುರಾಮ ಥೀರ್ಮ್ ಪಾರ್ಕ್ ನಲ್ಲಿ ಹಿಂದುತ್ವ ಮತ್ತು ಹಿಂದೂಗಳ ಭಾವನೆಗೆ ದಕ್ಕೆಯಾಗಿದೆ ಎಂದೆಲ್ಲ ಕೆಲವರು ಬೊಬ್ಬೆ ಹಾಕುತ್ತಿದ್ದಾರೆ. ಆದರೆ ಪರಶುರಾಮ ಥೀಮ್ ಪಾರ್ಕ್ ಧಾರ್ಮಿಕ ಕ್ಷೇತ್ರವೇ ಅಲ್ಲ. ಅದೊಂದು ಪ್ರವಾಸಿ ತಾಣ ಆಗಿದೆ. ಅಲ್ಲಿಗೆ ಯಾರು ಬೇಕಾದರೂ ಪಾದರಕ್ಷೆಯನ್ನು ಹಾಕಿಕೊಂಡು ಹೋಗಬಹುದು. ಅಲ್ಲಿ ತೆಂಗಿನಕಾಯಿ ಒಡೆಯಲು, ಊದುಬತ್ತಿ ಹಚ್ಚಲು, ಮಂಗಳಾರತಿ ಮಾಡಲು ಅವಕಾಶವೇ ಇಲ್ಲ ಎಂದು ಕಾರ್ಕಳ ಶಾಸಕ, ಮಾಜಿ ಸಚಿವ ಸುನೀಲ್ ಕುಮಾರ್ ಸ್ಪಷ್ಟ ಪಡಿಸಿದ್ದಾರೆ.

ಕಾರ್ಕಳ ಬಿಜೆಪಿ ಕಚೇರಿಯಲ್ಲಿಂದು ನಡೆದ ಕಾರ್ಯಕರ್ತರ ಸಭೆಯನ್ನು ದ್ದೇಶಿಸಿ ಮಾತನಾಡಿದ ಅವರು, ಪ್ರವಾಸೋದ್ಯಮ ಬೆಳೆಸುವ ನಿಟ್ಟಿನಲ್ಲಿ ಪರಶು ರಾಮ ಥೀಮ್ ಪಾರ್ಕ್ ಸ್ಥಾಪಿಸಲಾಗಿದೆ. ಈ ಯೋಜನೆ ಪೂರ್ಣ ಗೊಂಡಿಲ್ಲ, ಇದರಲ್ಲಿ ಸಣ್ಣಪುಟ್ಟ ಬದಲಾವಣೆಗಳಿವೆ ಮತ್ತು ಅದಕ್ಕೆ ಎರಡು ತಿಂಗಳ ಕಾಲಾವಕಾಶಬೇಕೆಂದು ವಿಗ್ರಹ ನಿರ್ಮಿಸಿದ ಶಿಲ್ಪಿಗೆ ಸನ್ಮಾನ ಮಾಡುವ ಸಂದರ್ಭದಲ್ಲೇ ನಾನು ಹೇಳಿದ್ದೆ ಎಂದರು.ಅದೊಂದು ಪ್ರವಾಸೋದ್ಯಮ ಸ್ಥಳವೆಂದು ಮೊದಲಿನಿಂದಲೂ ನಾನು ಹೇಳಿಕೊಂಡು ಬಂದಿದ್ದೇನೆ. ಆದರೆ ಕೆಲವರಿಗೆ ಈಗ ಹಿಂದುತ್ವ ಶುರುವಾಗಿ ಬಿಟ್ಟಿದೆ. ಭಾವನೆಗೆ ಧಕ್ಕೆಯಾಗಿದೆಂದು ಹೇಳುವವರು ಪಾರ್ಕ್ನ ಕೆಳಗೆ ನಿರ್ಮಿಸಿರುವ ಭಜನಾ ಮಂದಿರಕ್ಕೆ ಒಂದು ದಿನವೂ ಭೇಟಿ ಕೊಟ್ಟಿಲ್ಲ. ಒಂದು ರೂಪಾಯಿ ಹುಂಡಿಗೆ ದುಡ್ಡು ಹಾಕಿಲ್ಲ ಎಂದು ಅವರು ಟೀಕಿಸಿದರು.

ಇದಕ್ಕೆ ಧಾರ್ಮಿಕ ಸ್ಪರ್ಶ ಕೊಡುವ ನಿಟ್ಟಿನಲ್ಲಿ ಕೆಳಗೊಂದು ಭಜನಾ ಮಂದಿರ ನಿರ್ಮಾಣ ಮಾಡಲಾಗಿದೆ. ಮೂರು ದಿನಗಳ ಕಾರ್ಯದಲ್ಲಿ ಮೊದಲ ದಿನ ಪರಶುರಾಮ ಮೂರ್ತಿಯ ಉದ್ಘಾಟನೆ, ಎರಡನೇ ದಿನ ಭಜನಾ ಮಂದಿರದ ಉದ್ಘಾಟನೆ ಮಾಡಲಾಗಿದೆ. ಧಾರ್ಮಿಕತೆ ಬೇರೆ, ಪ್ರವಾಸೋದ್ಯಮ ಬೇರೆ ಎಂಬ ಕಾರಣಕ್ಕೆ ಈ ಎರಡು ಕಾರ್ಯಕ್ರಮವನ್ನು ಬೆರೆಸಿಲ್ಲ. ಪರಶುರಾಮನ ಮೂರ್ತಿ ಯನ್ನು ಬೇರೆಯಾಗಿ ಉದ್ಘಾಟನೆ ಮಾಡಲಾಗಿತ್ತು. ಇದು ಅವರಿಗೆಲ್ಲ ಅರ್ಥ ಆಗಲ್ಲ ಎಂದು ಅವರು ಹೇಳಿದರು. ಸಭೆಯಲ್ಲಿ ಬಿಜೆಪಿ ಮುಖಂಡರಾದ ಮಣಿರಾಜ್ ಶೆಟ್ಟಿ, ಮಹಾವೀರ ಜೈನ್, ರೇಷ್ಮಾ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ