ಬೂದುಗುಂಬಳಕಾಯಿ ಒಡೆದು ರಾಜ್ಯ ಸರ್ಕಾರಕ್ಕೆ ಒಳ್ಳೆ ಬುದ್ಧಿ ಬರಲೆಂದು ಪ್ರತಿಭಟನೆ!!! - Mahanayaka

ಬೂದುಗುಂಬಳಕಾಯಿ ಒಡೆದು ರಾಜ್ಯ ಸರ್ಕಾರಕ್ಕೆ ಒಳ್ಳೆ ಬುದ್ಧಿ ಬರಲೆಂದು ಪ್ರತಿಭಟನೆ!!!

chamarajanagara
23/10/2023


Provided by

ಚಾಮರಾಜನಗರ: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರವುದನ್ನು ಖಂಡಿಸಿ ಕನ್ನಡಪರ ಹೋರಾಟಗಾರರು ಚಾಮರಾಜನಗರದಲ್ಲಿ ಕಳೆದ 40 ದಿನಗಳಿಂದ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದು ಇಂದು ಆಯುಧಪೂಜೆ ಹಿನ್ನೆಲೆ ಬೂದುಗುಂಬಳಕಾಯಿ ಒಡೆದು ಆಕ್ರೋಶ ಹೊರಹಾಕಿದ್ದಾರೆ.

ಚಾಮರಾಜನಗರದಲ್ಲಿ ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಭುವನೇಶ್ವರಿ ವೃತ್ತದಲ್ಲಿ ಚಾ.ರಂ.ಶ್ರೀನಿವಾಸಗೌಡ ನೇತೃತ್ವದಲ್ಲಿ ಬೂದುಗುಂಬಳಕಾಯಿ ಹಿಡಿದು ಧಿಕ್ಕಾರದ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು ಸರ್ಕಾರಗಳ ವಿರುದ್ಧ ಆಕ್ರೋಶ ಹೊರಹಾಕಿದರು.

ನಡು ರಸ್ತೆಯಲ್ಲಿ ಕರ್ನಾಟಕ, ಕೇಂದ್ರ ಸರ್ಕಾರದ ಹೆಸರೇಳಿ ನಿವಾಳಿಸಿ ಬೂದುಗುಂಬಳ ಕಾಯಿಗಳನ್ನು ಒಡೆದರು. ಕರ್ನಾಟಕಕ್ಕೆ ಮುಂದಾದರೂ ಒಳ್ಳೆಯ ಬುದ್ದಿ ಬರಲಿ, ತಮಿಳುನಾಡಿಗೆ ಹರಿಸುತ್ತಿರುವ ನೀರು ನಿಲ್ಲಿಸಲಿ ಎಂದು ಆಗ್ರಹಿಸಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hv1TpXr73MfF0Cet1rPZjq

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ