ಹುಲಿ ಉಗುರು ಪತ್ತೆ: ಇಬ್ಬರು ಆರೋಪಿಗಳನ್ನು ಬಂಧಿಸಿದ ಅರಣ್ಯಾಧಿಕಾರಿಗಳು - Mahanayaka

ಹುಲಿ ಉಗುರು ಪತ್ತೆ: ಇಬ್ಬರು ಆರೋಪಿಗಳನ್ನು ಬಂಧಿಸಿದ ಅರಣ್ಯಾಧಿಕಾರಿಗಳು

chikkamagaluru
23/10/2023


Provided by

ಕೊಟ್ಟಿಗೆಹಾರ: ಮೂಡಿಗೆರೆ ವಲಯ ಅರಣ್ಯ ವ್ಯಾಪ್ತಿಯ ಭಾರತಿ ಬೈಲ್ ಸಮೀಪದ ಕುಂದ್ರ ಎಂಬಲ್ಲಿ ಹುಲಿ ಉಗುರು ಪತ್ತೆಯಾಗಿರುವ ಖಚಿತ ಮಾಹಿತಿ ಮೇರೆಗೆ ಇಬ್ಬರು ಆರೋಪಿಗಳನ್ನು ಅರಣ್ಯ ಅಧಿಕಾರಿಗಳು ಬಂಧಿಸಿದ್ದಾರೆ.

ಭಾರತಿ ಬೈಲ್ ಸಮೀಪದ ಕುಂಡ್ರಾದ ಆರೋಪಿ ಸತೀಶ್ ಬಳಿ ಬೆಳ್ಳಿ ಸರದಲ್ಲಿ ಹುಲಿ ಉಗುರು ಪತ್ತೆಯಾಗಿದೆ. ಮತ್ತೋರ್ವ ಆರೋಪಿ ಹುಲ್ಲೇಮನೆ ಕುಂದೂರಿನ ಕೆ.ಎಸ್.ರಂಜಿತ್ ಅವರನ್ನು ಕೂಡ ಬಂಧಿಸಲಾಗಿದೆ.ಇನ್ನಿಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.

ಚಿಕ್ಕಮಗಳೂರು ಉಪ ಅರಣ್ಯ ಸಂರಕ್ಷಣಾಧಿಕಾರಿ ರಮೇಶ್ ಬಾಬು ಹಾಗೂ   ಮೂಡಿಗೆರೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ  ಡಿ.ರಘು ಅವರ ನಿರ್ದೇಶನದ  ಮೇರೆಗೆ  ಈ ಕಾರ್ಯಾಚರಣೆಯಲ್ಲಿ ಮೂಡಿಗೆರೆ ವಲಯ ಅರಣ್ಯ ಅಧಿಕಾರಿಗಳಾದ ಚರಣ್ ಕುಮಾರ್, ಆಲ್ದೂರು ವಲಯ ಅರಣ್ಯ ಅಧಿಕಾರಿ ಹರೀಶ್,ಮೂಡಿಗೆರೆ ಉಪ ವಲಯ ಅರಣ್ಯ ಅಧಿಕಾರಿಗಳಾದ ಶಿವಕುಮಾರ್,ಚೇತನ್ ಕುಮಾರ್, ಆರ್.ಹರೀಶ್, ಚೇತನ್ ಕುಮಾರ್,ಸುಮಂತ್ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ