ಉಡುಪಿ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ: ಕೋಡಿಬೆಂಗ್ರೆಯ ಸ್ಮಶಾನದಲ್ಲಿ ಅಂತಿಮ ಸಂಸ್ಕಾರಕ್ಕೆ ಸಿದ್ಧತೆ - Mahanayaka

ಉಡುಪಿ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ: ಕೋಡಿಬೆಂಗ್ರೆಯ ಸ್ಮಶಾನದಲ್ಲಿ ಅಂತಿಮ ಸಂಸ್ಕಾರಕ್ಕೆ ಸಿದ್ಧತೆ

nejaru
13/11/2023


Provided by

ಉಡುಪಿ: ನೇಜಾರು ತೃಪ್ತಿ ಲೇಔಟ್‌ ನಲ್ಲಿ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ ಹಿನ್ನೆಲೆಯಲ್ಲಿ ಇದೀಗ ಮಣಿಪಾಲದ ಕೆಎಂಸಿ ಆಸ್ಪತ್ರೆಯಿಂದ ಮರಣೋತ್ತರ ಪರೀಕ್ಷೆಯ ಬಳಿಕ ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ.

ಎರಡು ಮಸೀದಿ ಒಂದು ಸ್ಮಶಾನದಲ್ಲಿ ಮೃತದೇಹಗಳನ್ನು ಶುದ್ಧ ನಡೆಸುವ ಪ್ರಕ್ರಿಯೆ ನಡೆಸಲಾಯಿತು. ಆಸ್ಪತ್ರೆಯಿಂದ ಉಡುಪಿಯ ಇಂದ್ರಾಳಿ, ಜಾಮೀಯಾ ಮಸೀದಿಯತ್ತ ಮೃತದೇಹಗಳನ್ನು ರವಾನಿಸಲಾಗಿದ್ದು, ಕೋಡಿಬೆಂಗ್ರೆಯ ಸ್ಮಶಾನದಲ್ಲಿ ಅಂತಿಮ ಸಂಸ್ಕಾರಕ್ಕೆ ಸಿದ್ಧತೆ ನಡೆಸಲಾಗಿದೆ  ಎಂದು ತಿಳಿದು ಬಂದಿದೆ.

ಮೃತ ಹಸೀನಾ ಪತಿ ನೂರ್‌ ಮೊಹಮ್ಮದ್‌ ಅವರು ಸೌದಿ ಅರೇಬಿಯಾದಿಂದ ಆಗಮಿಸಿದ್ದಾರೆ.

ಉಡುಪಿ ಜಿಲ್ಲೆಯ ನೇಜಾರು ತೃಪ್ತಿ ಲೇಔಟ್‌ ದುಷ್ಕರ್ಮಿಯೋರ್ವ ಮನೆಗೆ ನುಗ್ಗಿ ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ನಡೆಸಿದ್ದ. ಈ ಘಟನೆ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಇನ್ನೂ ಕೂಡ ಹತ್ಯೆಗೆ ಕಾರಣ ಏನು ಎನ್ನುವುದು ತಿಳಿದು ಬಂದಿಲ್ಲ. ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

ಇದನ್ನೂ ಓದಿ:

ನೇಜಾರು ನಾಲ್ವರ ಭೀಕರ ಹತ್ಯೆ ಪ್ರಕರಣ: ಆಟೋದಲ್ಲೇ ಹೋಗಿ 15 ನಿಮಿಷದಲ್ಲೇ ವಾಪಸ್‌ ಬಂದಿದ್ದ ಹಂತಕ: ನಾಲ್ವರನ್ನು ಕೊಂದಿದ್ದೇಕೆ?


 

ಇತ್ತೀಚಿನ ಸುದ್ದಿ