ರಾಜಸ್ಥಾನದಲ್ಲಿ ಭೀಕರ ಅಪಘಾತ: ಕಾರು ಟ್ರಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಪೊಲೀಸ್ ಅಧಿಕಾರಿಗಳು ಸಾವು - Mahanayaka

ರಾಜಸ್ಥಾನದಲ್ಲಿ ಭೀಕರ ಅಪಘಾತ: ಕಾರು ಟ್ರಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಪೊಲೀಸ್ ಅಧಿಕಾರಿಗಳು ಸಾವು

19/11/2023


Provided by

ರಾಜಸ್ಥಾನದ ಚುರುವಿನಲ್ಲಿ ಭಾನುವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಐವರು ಪೊಲೀಸ್ ಅಧಿಕಾರಿಗಳು ಸಾವನ್ನಪ್ಪಿದ್ದಾರೆ. ಇಬ್ಬರು ಗಾಯಗೊಂಡಿದ್ದಾರೆ. ಅಪಘಾತದ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಾಜ್ಯಕ್ಕೆ ಭೇಟಿ ನೀಡುವ ಹಿನ್ನೆಲೆಯಲ್ಲಿ ಅಧಿಕಾರಿಗಳು ಕರ್ತವ್ಯಕ್ಕಾಗಿ ನಾಗೌರ್ನಿಂದ ಜುಂಜುನುಗೆ ಪ್ರಯಾಣಿಸುತ್ತಿದ್ದರು.

ಘಟನೆಯ ಬಗ್ಗೆ ಪ್ರತಿಕ್ರಿಯಿಸಿದ ರಾಜ್ಯ ಅಧಿಕಾರಿಯೊಬ್ಬರು, ವಾಹನವು ಹೆಚ್ಚಿನ ವೇಗದಲ್ಲಿ ಚಲಿಸುತ್ತಿದ್ದಾಗ ಟ್ರಕ್ ಅವರನ್ನು ಓವರ್ ಟೇಕ್ ಮಾಡಿ ಇದ್ದಕ್ಕಿದ್ದಂತೆ ಬ್ರೇಕ್ ಹಾಕಿತು ಎಂದು ಹೇಳಿದರು.

ಪೊಲೀಸ್ ವಾಹನವು ಟ್ರಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಅಧಿಕಾರಿಗಳು ಸಾವನ್ನಪ್ಪಿದ್ದಾರೆ ಎಂದು ಅವರು ಹೇಳಿದರು.
ಅಪಘಾತದ ಸಮಯದಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಎಲ್ಲಾ ಪೊಲೀಸ್ ಅಧಿಕಾರಿಗಳು ರಾಜಸ್ಥಾನದ ನಾಗೌರ್ ಜಿಲ್ಲೆಯವರೆಂದು ಗುರುತಿಸಲಾಗಿದೆ.

ಇತ್ತೀಚಿನ ಸುದ್ದಿ